ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಮಾತನಾಡಿ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳ ಆಡಳಿತಾವಧಿ ಮುಗಿದಿದೆ. ಗ್ರಾಮಗಳ ಅಭಿವೃದ್ಧಿ ಕುಂಠಿತವಾಗಬಾರದು ಎಂದರೆ ಸರ್ಕಾರ ಕೂಡಲೇ ಪಂಚಾಯಿತಿ ಸೇರಿ ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಬೇಕು ಎಂದು ಆಗ್ರಹಿಸಿದರು. ಎಂಎಲ್‌ಸಿಗಳಾದ ಡಾ. ಧನಂಜಯ ಸರ್ಜಿ, ಅಬ್ದುಲ್ ಜಬ್ಬಾರ್, ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಸರ್ಕಾರದ ಆರ್‌ಡಿಪಿ ಪ್ರಧಾನ ಕಾರ್ಯದರ್ಶಿ ಸಮೀರಶುಕ್ಲ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ತಹಸೀಲ್ದಾರ್ ರಾಜೇಶಕುಮಾರ್, ತಾಪಂ ಇಒ ಡಿ.ಜಿ. ಅಶೋಕ್, ಮಾಜಿ ಶಾಸಕ ಡಾ.ಡಿ.ಬಿ. ಗಂಗಪ್ಪ ಇತರರು ಇದ್ದರು.