ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ ಸಿದ್ಧತೆ ಕುರಿತು ನಡೆದ ಸಭೆಯಲ್ಲಿ ಜಿ.ಎಂ. ಗಂಗಾಧರ ಸ್ವಾಮಿ, ಶೇಖರ್ ಎಚ್.ಟಿ, ಪರಮೇಶ್ವರ ಹೆಗಡೆ ಇದ್ದರು.
ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ ಸಿದ್ಧತೆ ಕುರಿತು ನಡೆದ ಸಭೆಯಲ್ಲಿ ಜಿ.ಎಂ. ಗಂಗಾಧರ ಸ್ವಾಮಿ, ಶೇಖರ್ ಎಚ್.ಟಿ, ಪರಮೇಶ್ವರ ಹೆಗಡೆ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಲು ಡಿಸಿ ಸೂಚನೆ
  • 200 ಮೀಟರ್ ವ್ಯಾಪ್ತಿ ಸಾರ್ವಜನಿಕ ಪ್ರವೇಶಕ್ಕೆ ನಿಷಿದ್ಧ

ದಾವಣಗೆರೆ : ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ ಭಾನುವಾರ ಬೆಳಗ್ಗೆ 10.30ರಿಂದ 12 ಗಂಟೆಯ ವರೆಗೆ ನಗರದ 19 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ಶಿಸ್ತುಬದ್ಧವಾಗಿ ನಡೆಸಲು ನಿಯೋಜಿತ ಪರೀಕ್ಷಾ ವೀಕ್ಷಕರು, ಅಧಿಕಾರಿಗಳು ಮತ್ತು ಸಿಬ್ಬಂದಿ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚನೆ ನೀಡಿದರು.

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
ಪರೀಕ್ಷಾ ಕೇಂದ್ರಗಳಿಗೆ ಶಿವದಾರ, ಜನಿವಾರ, ಉಡುದಾರ, ಮಾಂಗಲ್ಯ, ಮೂಗುತಿ ಮತ್ತು ವಿಭೂತಿಗೆ ಅವಕಾಶವಿದೆ. 19 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದರು.
ಎಸ್ಪಿ ಶೇಖರ್ ಎಚ್.ಟಿ ಮಾತನಾಡಿ, ಒಟ್ಟು 11033 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪರೀಕ್ಷಾ ಅಕ್ರಮ ಕಂಡುಬಂದರೆ, ಅಂಥವರ ವಿರುದ್ಧ 15 ಲಕ್ಷ ರೂ.ಗಳಿಂದ 1 ಕೋಟಿ ರೂ. ವರೆಗೆ ದಂಡ ಮತ್ತು 10 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ತಿಳಿಸಿದರು.

19 ಕೇಂದ್ರಗಳ ವಿವರ

ಅಥಣಿ ಕಾಂಪೋಸಿಟ್ ಪದವಿಪೂರ್ವ ಕಾಲೇಜು, ಎಸ್.ಬಿ.ಸಿ. ಪ್ರಥಮದರ್ಜೆ ಕಾಲೇಜು, ಬಿ.ಎಸ್.ಸಿ. ಪ್ರಥಮ ದರ್ಜೆ ಕಾಲೇಜು, ಎಸ್.ಎಲ್. ಪದವಿಪೂರ್ವ ಕಾಲೇಜು, ಡಾ. ಎಸ್.ಎಸ್. ಪದವಿಪೂರ್ವ ಕಾಲೇಜು, ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ, ಎ.ವಿ.ಕೆ. ಮಹಿಳಾ ಪದವಿಪೂರ್ವ ಕಾಲೇಜು, ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು (ಹೈಸ್ಕೂಲ್ ಮೈದಾನ), ಡಿ.ಆರ್.ಎಂ. ಸೈನ್ಸ್ ಪದವಿಪೂರ್ವ ಕಾಲೇಜು, ಮೋತಿ ವೀರಪ್ಪ ಸರ್ಕಾರಿ ಪದವಿಪೂರ್ವ ಕಾಲೇಜು, ಎ.ಆರ್.ಜಿ. ಪದವಿಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜು, ಶ್ರೀ ತರಳಬಾಳು ಪದವಿಪೂರ್ವ ಕಾಲೇಜು, ಶ್ರೀ ಸಿದ್ಧಗಂಗಾ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಎಸ್.ಎ.ಜಿ.ಬಿ. ಪದವಿಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜು, ಸೇಂಟ್ ಪಾಲ್ಸ್ ಪದವಿಪೂರ್ವ ಕಾಲೇಜು, ಮಗನೂರು ಬಸಪ್ಪ ಪದವಿಪೂರ್ವ ಕಾಲೇಜು, ಸೇಂಟ್ ಜಾನ್ಸ್ ಪದವಿಪೂರ್ವ ಕಾಲೇಜು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net