ದಾವಣಗೆರೆ ವಿಶ್ವವಿದ್ಯಾಲಯ ಬಳಿ ಶುಕ್ರವಾರ, ‘ಸಿ’ ಮತ್ತು ‘ಡಿ’ ಗ್ರೂಪ್ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು. ಪ್ರಕಾಶ್ ಎಲ್.ಎಚ್., ಪರಶುರಾಮ್, ಶಿವಾಜಿರಾವ್, ಲಕ್ಷ್ಮಿಬಾಯಿ, ವಿಜಿಯಮ್ಮ, ಬಸವರಾಜ್ ಕೋಟೆ, ಹನುಮಂತ, ಮಧು, ನಿರ್ಮಲಾಬಾಯಿ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ದಾವಣಗೆರೆ ವಿವಿ ಬಳಿ ಪ್ರತಿಭಟನೆ
ಉದ್ಯೋಗ, ಸಾಮಾಜಿಕ ಭದ್ರತೆಗೆ ಆಗ್ರಹ
ದಾವಣಗೆರೆ : ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿರುವ ಗುತ್ತಿಗೆ, ಹೊರಗುತ್ತಿಗೆ ಕಾರ್ಮಿಕರನ್ನು ಏಕಾಏಕಿ ಸೇವೆಯಿಂದ ವಜಾಗೊಳಿಸಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾರ್ಮಿಕರ ಒಕ್ಕೂಟದ ವತಿಯಿಂದ ದಾವಣಗೆರೆ ವಿಶ್ವವಿದ್ಯಾಲಯ ‘ಸಿ’ ಮತ್ತು ‘ಡಿ’ ಗ್ರೂಪ್ ಹೊರಗುತ್ತಿಗೆ ನೌಕರರು ಶುಕ್ರವಾರ ಪ್ರತಿಭಟನೆ ನಡೆಸಿದರು.
ದಾವಣಗೆರೆ ವಿವಿ ಮುಂಭಾಗ ಸೇರಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು, ನ್ಯಾಯ ಒದಗಿಸುವಂತೆ ಆಗ್ರಹಿಸಿದರು.
ಕಾರ್ಯಕ್ಷಮತೆ ಹಾಗೂ ದಕ್ಷತೆಯಿಂದ ಹಲವಾರು ವರ್ಷಗಳಿಂದ ವಿಶ್ವವಿದ್ಯಾಲಯ ಅಭಿವೃದ್ದಿಗೆ ಸೇವೆ ಸಲ್ಲಿಸುತ್ತ ಬಂದಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಸಾಮಾಜಿಕ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ ಸೌಲಭ್ಯಗಳನ್ನು ನೀಡುವ ಬದಲು ಕಾರ್ಮಿಕರ ಬೇಡಿಕೆಗಳನ್ನು ಕಡೆಗಣಿಸಿ ಏಕಾಏಕಿ ವಜಾ ಮಾಡಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕರ ಸೇವೆಯನ್ನು ಗೌರವಿಸಿ, ವಜಾಗೊಳಿಸಿದ ಕಾರ್ಮಿಕರನ್ನು ಕೂಡಲೆ ಮರು ನೇಮಕ ಮಾಡಬೇಕು. ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಕಲಬುರಗಿ ವಿಶ್ವವಿದ್ಯಾಲಯದ ಕುಲಸಚಿವರಿಗೆ ಹಾಗೂ ಕುಲಪತಿಗೆ ಮನವಿ ಮಾಡಿದರು.
ಸಂಘದ ಉಪಾಧ್ಯಕ್ಷರಾದ ಪ್ರಕಾಶ್ ಎಲ್.ಎಚ್., ಪರಶುರಾಮ್, ಶಿವಾಜಿರಾವ್, ಲಕ್ಷ್ಮಿಬಾಯಿ, ವಿಜಿಯಮ್ಮ, ಜಂಟಿ ಕಾರ್ಯದರ್ಶಿ ಬಸವರಾಜ್ ಕೋಟೆ, ಹನುಮಂತ, ಮಧು, ನಿರ್ಮಲಾಬಾಯಿ ಭಾಗವಹಿಸಿದ್ದರು.