ಸ್ಪರ್ಧಾತ್ಮಕ ಪರೀಕ್ಷೆ ಸುಸೂತ್ರವಾಗಿ ನಿರ್ವಹಿಸಿ

ಸ್ಪರ್ಧಾತ್ಮಕ ಪರೀಕ್ಷೆ ವಿಚಾರವಾಗಿ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಡಿಡಿಪಿಯು ಪಳನಿ ಹಾಗೂ ವಿವಿಧ ಕಾಲೇಜುಗಳ ಪ್ರಾಚಾರ್ಯರಿದ್ದರು.
ಸ್ಪರ್ಧಾತ್ಮಕ ಪರೀಕ್ಷೆ ವಿಚಾರವಾಗಿ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಡಿಡಿಪಿಯು ಪಳನಿ ಹಾಗೂ ವಿವಿಧ ಕಾಲೇಜುಗಳ ಪ್ರಾಚಾರ್ಯರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • 13 ಕೇಂದ್ರಗಳಲ್ಲಿ ಬಂದೋಬಸ್ತ್ ಕೈಗೊಳ್ಳಿ
  • ಎಲ್ಲ ಪ್ರಶ್ನೆಗಳಿಗೂ ಉತ್ತರಿಸುವುದು ಕಡ್ಡಾಯ
  • ಎಡಿಸಿ ಶೀಲವಂತ ಶಿವಕುಮಾರ್ ಸೂಚನೆ
ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಹುದ್ದೆಗಳ ನೇರ ನೇಮಕಾತಿ ಸಂಬಂಧ, ಜ.11ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಲೋಪದೋಷಗಳಿಲ್ಲದೆ ಸುಸೂತ್ರ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಪರ್ಧಾತ್ಮಕ ಪರೀಕ್ಷೆ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದ 13 ಕಾಲೇಜು ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯು ಅಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ನಡೆಯಲಿದೆ. ಪ್ರತಿ 24 ವಿದ್ಯಾರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿ, ಅಗತ್ಯ ತರಬೇತಿ ನೀಡಬೇಕು ಎಂದು ಹೇಳಿದರು.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿ ವಿವರಗಳನ್ನು ಕ್ಯುಆರ್‌ಕೋಡ್ ಸ್ಕಾೃನ್ ಮೂಲಕ ಪಡೆಯಬೇಕು. ಪರೀಕ್ಷಾ ಕೇಂದ್ರಗಳಿಗೆ ಜಾಮರ್ ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಮುಂಜಾಗ್ರತೆ ಕ್ರಮವಾಗಿ 200 ಮೀ. ಪ್ರದೇಶವನ್ನು ನಿಷೇದಿತ ಸ್ಥಳವೆಂದು ಘೋಷಿಸಲಾಗಿದ್ದು ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು ಎಂದು ತಿಳಿಸಿದರು.
ಅಭ್ಯರ್ಥಿಗಳ ತಪಾಸಣೆಗೆ ಅಗತ್ಯವಿರುವಷ್ಟು ಹೋಂ ಗಾರ್ಡ್‌ಗಳನ್ನು ನೇಮಿಸಿಕೊಳ್ಳಬೇಕು. ಯಾವುದೇ ಲೋಪದೋಷಗಳಿಲ್ಲದೆ ವ್ಯವಸ್ಥಿತ ರೀತಿಯಲ್ಲಿ ಪರೀಕ್ಷೆ ನಡೆಸಲು ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ವಸತ್ತ ಸಂಹಿತೆ ಜಾರಿಗೊಳಿಸಿದ್ದು ಅದನ್ನು ಪಾಲಿಸಬೇಕು. ಅದರ ವಿವರಗಳನ್ನು ಪ್ರವೇಶ ಪತ್ರದಲ್ಲಿ ನಮೂದಿಸಲಾಗಿದೆ ಎಂದು ಹೇಳಿದರು.
ಎಲೆಕ್ಟಾನಿಕ್ ವಸ್ತು, ಮೊಬೈಲ್ ಫೋನ್, ಪೆನ್‌ಡ್ರೈವ್‌ಗಳು, ಇಯರ್ ಫೋನ್, ಮೈಕ್ರೋಫೋನ್, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳು, ತಿನ್ನಬಹುದಾದ ಪದಾರ್ಥಗಳು, ಟೋಪಿ , ಮಾಸ್ಕ್ ಮೊದಲಾದವನ್ನು ಪರೀಕ್ಷಾ ಕೇಂದ್ರಗಳಲ್ಲಿ ತೆಗೆದುಕೊಂಡು ಹೋಗುವುದನ್ನು ನಿಷೇದಿಸಲಾಗಿದೆ.
ಅಭ್ಯರ್ಥಿಗಳು ಲೇಖನಿ, ಪ್ರವೇಶ ಪತ್ರ ಹಾಗೂ ಫೋಟೋ ಗುರುತಿನ ಚೀಟಿಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ತೆಗೆದುಕೊಂಡು ಹೋಗಬಹುದು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಂದು ಪ್ರಶ್ನೆಗೆ 5 ಆಯ್ಕೆಗಳಿದ್ದು, ಕಡ್ಡಾಯವಾಗಿ ಪ್ರತಿ ಪ್ರಶ್ನೆಗೆ ಉತ್ತರವನ್ನು ಆಯ್ಕೆ ಮಾಡಬೇಕಾಗಿದೆ.
ಒಂದು ವೇಳೆ ಉತ್ತರ ತಿಳಿದಿಲ್ಲವೆಂದರೆ ಪರೀಕ್ಷಾ ಅವಧಿ ನಂತರ ಹೆಚ್ಚುವರಿಯಾಗಿ 5 ನಿಮಿಷಗಳನ್ನು ನೀಡಿದ್ದು ಈ ಅವಧಿಯಲ್ಲಿ ಕೊನೆಯ ಆಯ್ಕೆ ಅನ್ನು ಕಡ್ಡಾಯವಾಗಿ ಮಾಡಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿ ಪಡೆದ ಒಟ್ಟು ಅಂಕಗಳಲ್ಲಿ ಒಂದನೇ ನಾಲ್ಕು ಭಾಗ ಕಡಿತಗೊಳಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಳನಿ ಹಾಗೂ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಕಾಲೇಜುಗಳ ಪ್ರಾಚಾರ್ಯರಿದ್ದರು.
ಪರೀಕ್ಷೆ ಹಿನ್ನೆಲೆಯಲ್ಲಿ 13 ಕೇಂದ್ರಗಳ ಸುತ್ತ ಸಾರ್ವಜನಿಕ ಪ್ರವೇಶ ನಿಷೇದಿತ ಪ್ರದೇಶವೆಂದು ಘೋಷಿಸಿದ್ದು ಈ ಪರಿದಿಯ ಜೆರಾಕ್ಸ್‌ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕು. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕು. ಜಿ.ಎಂ.ಗಂಗಾಧರ ಸ್ವಾಮಿ, ಜಿಲ್ಲಾಧಿಕಾರಿ.
---
ಸ್ಪರ್ಧಾತ್ಮಕ ಪರೀಕ್ಷೆ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಡಿಡಿಪಿಯು ಪಳನಿ ಹಾಗೂ ವಿವಿಧ ಕಾಲೇಜುಗಳ ಪ್ರಾಚಾರ್ಯರಿದ್ದರು.
---
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net