ನಾವೀನ್ಯ ಸಾಧಿಸಲು ಸೃಜನಶೀಲತೆ ಬೆಳೆಸಿಕೊಳ್ಳಿ

ಹರಿಹರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ನಿವೃತ್ತ ಪ್ರಾಚಾರ್ಯ ಡಾ.ಎಂ. ಮಂಜಣ್ಣ ಚಾಲನೆ ನೀಡಿದರು. ಆರ್.ಎಫ್. ದೇಸಾಯಿ, ಡಾ.ಎಂ.ಎನ್. ರಮೇಶ್, ಡಾ.ಎಚ್.ಪಿ. ಅನಂತನಾಗ್ ಇದ್ದರು.
ಹರಿಹರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ನಿವೃತ್ತ ಪ್ರಾಚಾರ್ಯ ಡಾ.ಎಂ. ಮಂಜಣ್ಣ ಚಾಲನೆ ನೀಡಿದರು. ಆರ್.ಎಫ್. ದೇಸಾಯಿ, ಡಾ.ಎಂ.ಎನ್. ರಮೇಶ್, ಡಾ.ಎಚ್.ಪಿ. ಅನಂತನಾಗ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಾ.ಎಂ. ಮಂಜಣ್ಣ ಅಭಿಪ್ರಾಯ
  • ಯುವ ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ
  • ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
ಹರಿಹರ: ಯುವ ಜನರಲ್ಲಿ ಸಾಮರಸ್ಯ ಮನೋಭಾವ ಬೆಳೆಸಲು ಮತ್ತು ಜವಾಬ್ದಾರಿಯುತ ನಾಗರಿಕರನ್ನು ರೂಪಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ನಿವೃತ್ತ ಪ್ರಾಚಾರ್ಯ ಡಾ.ಎಂ. ಮಂಜಣ್ಣ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ಸ್ಕೌಟ್ ಮತ್ತು ಗೈಡ್ ಹಾಗೂ ಯುವ ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ ಮತ್ತು ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣವು ಜ್ಞಾನ, ತಿಳವಳಿಕೆ ಮತ್ತು ಜೀವನ ತತ್ವಗಳನ್ನು ಬೆಳೆಸಲು ಸಹಾಯ ಮಾಡುತ್ತದೆ. ಉತ್ತಮ ಶಿಕ್ಷಣವು ಉದ್ಯೋಗ ಮತ್ತು ಉನ್ನತ ಶಿಕ್ಷಣದ ಅವಕಾಶಗಳನ್ನು ಹೆಚ್ಚಿಸುತ್ತದೆ ಹಾಗೂ ಯುವ ಜನರ ಸರ್ವತೋಮುಖ ಬೆಳವಣಿಗೆಗೆ ಪ್ರಮುಖ ಕೊಡುಗೆ ನೀಡುತ್ತದೆ ಎಂದರು.
ಮೂಲ ವಿಜ್ಞಾನ, ತಂತ್ರಜ್ಞಾನ, ಕಲೆ ಮತ್ತು ಸಂಸ್ಕೃತಿಯಂತಹ ಬಹು ವಿಭಾಗಗಳಲ್ಲಿ ನಾವೀನ್ಯ ಸಾಧಿಸಲು ಅಪಾರ ಸೃಜನಶೀಲ ಶಕ್ತಿಯನ್ನು ಅಗತ್ಯವಾಗಿ ಯುವಕರು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಆರ್.ಎಫ್. ದೇಸಾಯಿ ಮಾತನಾಡಿ, ಇತ್ತೀಚೆಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ಪದಾರ್ಥಗಳಿಗೆ ದಾಸರಾಗುತ್ತಿದ್ದಾರೆ. ಇದು ಸಮಾಜಘಾತಕ ಕೆಲಸಗಳಿಗೆ ಕಾರಣವಾಗುತ್ತಿದೆ ಎಂದರು. 
ಪ್ರಾಚಾರ್ಯ ಡಾ.ಎಂ.ಎನ್. ರಮೇಶ್ ಅಧ್ಯಕ್ಷತೆವಹಿಸಿದ್ದರು. ಐಕ್ಯೂಎಸ್‌ಸಿ ಮತ್ತು ಸಾಂಸ್ಕೃತಿಕ ವಿಭಾಗದ ಸಂಚಾಲಕ  ಡಾ.ಎಚ್.ಪಿ. ಅನಂತನಾಗ್ ಪ್ರಾಸ್ತಾವಿಕ ಮಾತನಾಡಿದರು. ಅಧೀಕ್ಷಕರಾದ ಜಬೀನ್ ತಾಜ್, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಸಿ. ಚಂದ್ರಶೇಖರ್, ರೇಂಜರ್ಸ್‌ ಲೀಡರ್‌ಗಳಾದ ಡಾ.ಎಂ.ಎಸ್. ಗೌರಮ್ಮ, ಕೆ.ಎಸ್. ಮನೋಹರ್, ಯುವ ರೆಡ್ ಕ್ರಾಸ್‌ನ ಸಂಚಾಲಕ ಡಾ.ಎಸ್. ಗಂಗರಾಜು, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಕೆ.ಜೆ. ಯೋಗಿಶ್, ಕೆ.ವೈ. ಹನುಮಂತಪ್ಪ, ಐಕ್ಯೂಎಸಿ ಸಹ ಸಂಯೋಜಕ ಅಬ್ದುಲ್ ಬಷೀರ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net