ದಾವಣಗೆರೆ : ಇಲ್ಲಿನ ಚಿಗಟೇರಿ ಜಿಲ್ಲಾಸ್ಪತ್ರೆಯ ಕಿವಿ, ಮೂಗು, ಗಂಟಲು (ಇಎನ್‌ಟಿ) ವಿಭಾಗದ ಶಸ್ತ್ರಚಿಕಿತ್ಸಾ ಕೊಠಡಿಯ ವರ್ಕ್ ಸ್ಟೇಷನ್‌ನಲ್ಲಿ ಮಂಗಳವಾರ ಬೆಳಗ್ಗೆ ಸಿಲಿಂಡರ್ ಸ್ಫೋಟ ಸಂಭವಿಸಿ ಬೆಲೆ ಬಾಳುವ ಯಂತ್ರೋಪಕರಣಗಳು, ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿ ಲಕ್ಷಾಂತರ ರೂ. ನಷ್ಟವಾಗಿದೆ, ಯಾವುದೇ ಪ್ರಾಣಾಪಾಯವಾಗಿಲ್ಲ.