ಎಸ್ಸೆಸ್ಸೆಂಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ

ದಾವಣಗೆರೆಯಲ್ಲಿ ಗುರುವಾರ, ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಕಬೀರ್ ಖಾನ್, ಜಾಕೀರ್, ಫಾರೂಕ್, ರಫೀಕ್, ಸಾಬಿರ್ ಅಲಿ, ಅಬ್ದುಲ್ ಘನಿ, ಲಿಯಾಕತ್ ಇದ್ದರು.
ದಾವಣಗೆರೆಯಲ್ಲಿ ಗುರುವಾರ, ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಕಬೀರ್ ಖಾನ್, ಜಾಕೀರ್, ಫಾರೂಕ್, ರಫೀಕ್, ಸಾಬಿರ್ ಅಲಿ, ಅಬ್ದುಲ್ ಘನಿ, ಲಿಯಾಕತ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಭಿಮಾನಿಗಳು, ಕಾರ್ಯಕರ್ತರ ಪ್ರತಿಭಟನೆ
  • ಉಗ್ರ ಹೋರಾಟದ ಎಚ್ಚರಿಕೆ
ದಾವಣಗೆರೆ : ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಅವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಮಾಗಾನಹಳ್ಳಿ ರಸ್ತೆಯ ಅರಳಿಮರ ವೃತ್ತದಲ್ಲಿ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ತಮ್ಮ ಬೇಡಿಕೆಯ ಬಗ್ಗೆ ಗಮನ ಸೆಳೆದರು.
ಈ ವೇಳೆ ಮಹಾನಗರ ಪಾಲಿಕೆ ಮಾಜಿ ಸದಸ್ಯ ಕಬೀರ್ ಖಾನ್ ಮಾತನಾಡಿ, ಮಧ್ಯ ಕರ್ನಾಟಕದ ಮುತ್ಸದ್ದಿ ರಾಜಕಾರಣಿಯಾಗಿರುವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡುವ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ವರಿಷ್ಠರು ಗಮನ ಹರಿಸಬೇಕು. 2ನೇ ಹಂತದ ಸಚಿವ ಸಂಪುಟ ವಿಸ್ತರಣೆ ವೇಳೆ ಮಲ್ಲಿಕಾರ್ಜುನ್ ಅವರಿಗೆ ಅವಕಾಶ ನೀಡದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಮುಖಂಡ ಜಾಕೀರ್ ಮಾತನಾಡಿ, ಮಧ್ಯ ಕರ್ನಾಟಕದಿಂದ ಶಾಮನೂರು ಶಿವಶಂಕರಪ್ಪ ಅವರಿಗೆ ಡಿಸಿಎಂ ಹುದ್ದೆ ನೀಡಬೇಕಾಗಿತ್ತು. ಅವರು ನಮ್ಮನ್ನು ಅಗಲಿರುವುದರಿಂದ ಅವರ ಪುತ್ರ ಮಲ್ಲಿಕಾರ್ಜುನ್ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಮನವಿ ಮಾಡಿದರು.
ಮುಖಂಡರಾದ ಫಾರೂಕ್, ರಫೀಕ್, ಸಾಬಿರ್ ಅಲಿ, ಅಬ್ದುಲ್ ಘನಿ, ಲಿಯಾಕತ್ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net