ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸುವ ಸಂಕಲ್ಪ

ದಾವಣಗೆರೆಯಲ್ಲಿ ಬುಧವಾರ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು. ಗಿತ್ತೆ ಮಾಧವ ವಿಠ್ಠಲರಾವ್, ಜಿ. ಕೊಟ್ರೇಶ್ ಇತರ ಅಧಿಕಾರಿಗಳು ಇದ್ದರು.
ದಾವಣಗೆರೆಯಲ್ಲಿ ಬುಧವಾರ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು. ಗಿತ್ತೆ ಮಾಧವ ವಿಠ್ಠಲರಾವ್, ಜಿ. ಕೊಟ್ರೇಶ್ ಇತರ ಅಧಿಕಾರಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮೊದಲ 5 ಸ್ಥಾನದೊಳಗಿರಲಿ ಜಿಲ್ಲೆ
  • ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸೂಚನೆ
ದಾವಣಗೆರೆ : ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಫಲಿತಾಂಶವನ್ನು ಹೆಚ್ಚಿಸಲು ಮತ್ತು ಜಿಲ್ಲೆಯನ್ನು ಮೊದಲ 5ರ ಸ್ಥಾನದಲ್ಲಿರುವಂತೆ ಶಿಕ್ಷಕರು, ಮುಖ್ಯ ಶಿಕ್ಷಕರು ಶ್ರಮಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಹಾಗೂ ಉಪ ಪ್ರಾಂಶುಪಾಲರ ಸಂಘದ ವತಿಯಿಂದ ನಗರದ ಗುರುಭವನದಲ್ಲಿ ಬುಧವಾರ ಏರ್ಪಡಿಸಿದ್ದ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು 8ನೇ ತರಗತಿಯಲ್ಲಿ ವ್ಯಾಸಂಗ ಮಾಡುವಾಗ ಪ್ರತಿ ವಿಷಯಕ್ಕೆ ಎರಡು ಅಧ್ಯಾಯಗಳ ನಂತರ ಕಿರು ಪರೀಕ್ಷೆಗಳನ್ನು ಆಯೋಜಿಸಿ, ನಂತರ ಅವರು ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆ ಎಂಬುದನ್ನು ಗಮನ ಹರಿಸಿ, ವಿಶೇಷ ತರಗತಿಗಳನ್ನು ನಡೆಸಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಪಠ್ಯದ ಜತೆ ಪೌರಾಣಿಕ, ಸ್ಫೂರ್ತಿದಾಯಕ ಕತೆಗಳನ್ನು ಹೇಳಬೇಕು, ಹೆಚ್ಚು ಅಂಕ ಪಡೆದ ಹಳೆಯ ವಿದ್ಯಾರ್ಥಿಗಳ ಯಶೋಗಾಥೆಯನ್ನು ವಿವರಿಸಬೇಕು. ಜಿಲ್ಲೆಯಲ್ಲಿ ಕ್ಲಸ್ಟರ್‌ಗಳನ್ನು ಮಾಡಿಕೊಂಡು, ಶಿಕ್ಷಕರು ಕೊರತೆ ಇದ್ದಲ್ಲಿ ಹತ್ತಿರದಲ್ಲಿನ ಆಯಾ ವಿಷಯದ ಶಿಕ್ಷಕರನ್ನು ನಿಯೋಜಿಸಬೇಕು.
ಎಲ್ಲ ಚಟುವಟಿಕೆಗಳನ್ನು ಕೈಗೊಂಡು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಉತ್ತಮಗೊಳಿಸಲು ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ, ಎಲ್ಲ ಶಾಲೆಗಳಲ್ಲಿ ಶೇ. 100ರಷ್ಟು ಫಲಿತಾಂಶ ಬರಲು ಪ್ರಯತ್ನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ಪಡೆದ ಶಾಲೆಗಳಿಗೆ ಸ್ಮರಣಿಕೆ ಮತ್ತು 25 ಸಾವಿರ ರೂ. ನಗದ ಬಹುಮಾನವನ್ನು ವಿತರಿಸಲಾಯಿತು.
ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
"

ಜಿಲ್ಲೆಯು ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಕಳೆದ ಬಾರಿ ರಾಜ್ಯಮಟ್ಟದಲ್ಲಿ 24ನೇ ಸ್ಥಾನ ಪಡೆದಿತ್ತು. ಈ ವರ್ಷ ಇನ್ನೂ ಹೆಚ್ಚಿನ ಸ್ಥಾನ ಪಡೆಯಲು ಕ್ರಮ ವಹಿಸಲಾಗಿದೆ. ಜೂನ್ ತಿಂಗಳಿಂದ ಕ್ರಿಯಾ ಯೋಜನೆಯನ್ನು ತಯಾರಿಸಿದ್ದು ಡಿಸೆಂಬರ್ ತಿಂಗಳೊಳಗೆ ಪಠ್ಯವನ್ನು ಮುಗಿಸಿ, ಜನವರಿಯಿಂದ ಪಠ್ಯಪುಸ್ತಕ ಆಧಾರಿತ 130-150 ಪ್ರಶ್ನೆಗಳನ್ನು ಸಿದ್ಧಪಡಿಸಿ ವಿದ್ಯಾರ್ಥಿಗಳಿಗೆ ಯಾವ ರೀತಿ ಉತ್ತರ ಬರೆಯಬೇಕು ಎಂಬುದನ್ನು ಮನವರಿಕೆ ಮಾಡಿಕೊಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net