ಮಹಿಳಾ ಸಶಕ್ತೀಕರಣಕ್ಕೆ ಶಿಕ್ಷಣವೇ ಆಧಾರ Seminar

ಚನ್ನಗಿರಿ ತಾಲೂಕು ದೇವರಹಳ್ಳಿ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಪಿಎಸ್‌ಐ ರೂಪ್ಲಿಬಾಯಿ ಉದ್ಘಾಟಿಸಿದರು. ಎ.ಆರ್. ರಂಗನಾಥ್, ಶಶಿಕಲಾ ಈಶ್ವರ, ಸಂತೋಷ್, ರತ್ನಮೈಪಾಲ್ ಇದ್ದರು.Seminar
ಚನ್ನಗಿರಿ ತಾಲೂಕು ದೇವರಹಳ್ಳಿ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಪಿಎಸ್‌ಐ ರೂಪ್ಲಿಬಾಯಿ ಉದ್ಘಾಟಿಸಿದರು. ಎ.ಆರ್. ರಂಗನಾಥ್, ಶಶಿಕಲಾ ಈಶ್ವರ, ಸಂತೋಷ್, ರತ್ನಮೈಪಾಲ್ ಇದ್ದರು.Seminar
Published on

ಪ್ರಮುಖ ಮುಖ್ಯಾಂಶಗಳು

  • ಪಿಎಸ್‌ಐ ರೂಪ್ಲಿಬಾಯಿ ಹೇಳಿಕೆ
  • ತಾಲೂಕು ಮಟ್ಟದ ವಿಚಾರಗೋಷ್ಠಿ
ಚನ್ನಗಿರಿ: ಮಹಿಳಾ ಸಶಕ್ತೀಕರಣಕ್ಕೆ, ಸಬಲೀಕರಣಕ್ಕೆ ಶಿಕ್ಷಣವೇ ಮೂಲ ಆಧಾರ ಎಂದು ಪಿಎಸ್‌ಐ ರೂಪ್ಲಿಬಾಯಿ ತಿಳಿಸಿದರು.
ತಾಲೂಕಿನ ದೇವರಹಳ್ಳಿ ಗ್ರಾಮದ ಶ್ರೀ ಉಡುಗಿರಿ ಲಕ್ಷ್ಮೀರಂಗನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಮತ್ತು ಮಹಿಳಾ ಜ್ಞಾನ ವಿಕಾಸ ಯೋಜನೆಯಡಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದರು.
ಮಹಿಳೆ ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರಾಗಲು ಶಿಕ್ಷಣ ಅತ್ಯಗತ್ಯ. ಶಿಕ್ಷಣ ಪಡೆಯದೆ ಸಬಲೀಕರಣ ಕಾಣಲು ಸಾಧ್ಯವಿಲ್ಲ. ಜ್ಞಾನ ಯಾವ ದಿಸೆಯಲ್ಲಿ ದೊರೆತರೂ ಅದನ್ನು ಪಡೆದುಕೊಳ್ಳುವ ತಿಳಿವಳಿಕೆ ನಮ್ಮಲ್ಲಿರಬೇಕು. ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಸರಿಯಾದ ಸಂಸ್ಕಾರವನ್ನು ತಾಯಂದಿರು ನೀಡಿದ್ದಲ್ಲಿ ವೃದ್ಧಾಶ್ರಮಗಳ ಸಂಖ್ಯೆ ಕಡಿಮೆ ಆಗಬಹುದು ಎಂದರು.
ಪಾಲಕರು ಗಂಡು-ಹೆಣ್ಣು ಎಂಬ ಭೇದ ಮಾಡದೆ ಇಬ್ಬರಿಗೂ ಸಮಾನ ಶಿಕ್ಷಣ ಮತ್ತು ಸೌಕರ್ಯಗಳನ್ನು ಕಲ್ಪಿಸುವ ಕೆಲಸ ಮಾಡಬೇಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಮನೆಯಲ್ಲಿ ಶಿಕ್ಷಣ ಪಡೆದ ಮಹಿಳೆ ಇದ್ದರೆ ಮುಂದೆ ಬರುವ ಎಲ್ಲರೂ ಶಿಕ್ಷಣ ಮತ್ತು ಸಂಸ್ಕಾರವನ್ನು ಸುಲಭವಾಗಿ ಪಡೆಯುತ್ತಾರೆ ಎಂದು ಹೇಳಿದರು.
ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸಮಾನವಾಗಿ ಸವಾಲನ್ನು ಎದುರಿಸುತ್ತ ಬಲಿಷ್ಠವಾಗಿ ಬೆಳೆಯುತ್ತಿದ್ದಾಳೆ. ಜತೆಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾಳೆ ಎಂದು ತಿಳಿಸಿದರು.
ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಪ್ರೊ.ಡಾ. ಶಾಂತಕುಮಾರಿ ಮಾತನಾಡಿ, ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮಾಡಲು ಸರ್ಕಾರ ಶೇ.33 ರಷ್ಟು ಮೀಸಲಾತಿಯನ್ನು ನೀಡಿದೆ. ಇದರ ಪ್ರಯೋಜನವನ್ನು ಪಡೆಯಬೇಕು. ಪ್ರತಿ ಮನೆಯಲ್ಲಿ ಮಗಳಾಗಿ, ಹೆಂಡತಿಯಾಗಿ, ತಾಯಿಯಾಗಿ, ಅಜ್ಜಿಯಾಗಿ ಪ್ರತಿ ಹಂತದಲ್ಲಿ ಕುಟುಂಬದ ನಿರ್ವಹಣೆಯನ್ನು ಮಾಡುವ ಹೆಣ್ಣು ಇಲ್ಲದ ಮನೆಯಲ್ಲಿ ಸಂಸ್ಕಾರವಂತ ಮಕ್ಕಳು ಇರಲಾರರು ಎಂದರು.
ದೇವರಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಎ.ಆರ್. ರಂಗನಾಥ್, ಜ್ಞಾನ ವಿಕಾಸ ಸಮನ್ವಯಾಧಿಕಾರಿಗಳಾದ ಶಶಿಕಲಾ ಈಶ್ವರ, ಸಂತೋಷ್, ರತ್ನಮೈಪಾಲ್, ಮೇಲ್ವಿಚಾರಕಿ ಅರುಣಾ, ಮನೋಜ, ಸಾಜನ್ ದೇವರಹಳ್ಳಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net