ಬಡವರಿಗೆ ವರವಾದ ಉದ್ಯೋಗ ಖಾತ್ರಿ ಯೋಜನೆ

ಆನಗೋಡು ಹೋಬಳಿಯ ಹೊನ್ನೂರು ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಮಹಾತ್ಮಗಾಂಧಿ ನರೇಗಾ ಕಾಮಗಾರಿ ಸ್ಥಳಗಳಲ್ಲಿ ಆರೋಗ್ಯ ಹಾಗೂ ಕೂಲಿಕಾರರ ಕುಂದುಕೊರತೆಗಳ ಪರಿಶೀಲನೆ ಕಾರ್ಯಕ್ರಮವನ್ನು ಸಂಸದ ಡಾ. ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು. ಕೆ.ಎಸ್. ಬಸವಂತಪ್ಪ, ಜಿಪಂ ಸಿಇಒ ಗಿತ್ತೆ ಮಾಧವ ವಿಠಲ ರಾವ್, ಇಒ ರಾಮಭೋವಿ, ಷಣ್ಮುಖಪ್ಪ ಇತರರಿದ್ದರು.Narega Scheme
ಆನಗೋಡು ಹೋಬಳಿಯ ಹೊನ್ನೂರು ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಮಹಾತ್ಮಗಾಂಧಿ ನರೇಗಾ ಕಾಮಗಾರಿ ಸ್ಥಳಗಳಲ್ಲಿ ಆರೋಗ್ಯ ಹಾಗೂ ಕೂಲಿಕಾರರ ಕುಂದುಕೊರತೆಗಳ ಪರಿಶೀಲನೆ ಕಾರ್ಯಕ್ರಮವನ್ನು ಸಂಸದ ಡಾ. ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು. ಕೆ.ಎಸ್. ಬಸವಂತಪ್ಪ, ಜಿಪಂ ಸಿಇಒ ಗಿತ್ತೆ ಮಾಧವ ವಿಠಲ ರಾವ್, ಇಒ ರಾಮಭೋವಿ, ಷಣ್ಮುಖಪ್ಪ ಇತರರಿದ್ದರು.Narega Scheme
Published on

ಪ್ರಮುಖ ಮುಖ್ಯಾಂಶಗಳು

  • ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅಭಿಮತ
  • ಕೂಲಿಕಾರರ ಕುಂದುಕೊರತೆಗಳ ಪರಿಶೀಲನೆ ಕಾರ್ಯಕ್ರಮ
ಮಾಯಕೊಂಡ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಪ್ರದೇಶದ ಜನರಿಗೆ ವರದಾನವಾಗಿದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಆನಗೋಡು ಹೋಬಳಿಯ ಹೊನ್ನೂರು ಗ್ರಾಮದಲ್ಲಿ ಮಂಗಳವಾರ ಗ್ರಾಮ ಪಂಚಾಯಿತಿಯಿಂದ ಆಯೋಜಿಸಿದ್ದ ಮಹಾತ್ಮಗಾಂಧಿ ನರೇಗಾ ಕಾಮಗಾರಿ ಸ್ಥಳಗಳಲ್ಲಿ ಆರೋಗ್ಯ ಹಾಗೂ ಕೂಲಿಕಾರರ ಕುಂದುಕೊರತೆಗಳ ಪರಿಶೀಲನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಧಿಕಾರಾವಧಿಯಲ್ಲಿ ಗ್ರಾಮೀಣ ಪ್ರದೇಶದ ಬಡ ಕೂಲಿ-ಕಾರ್ಮಿಕ, ರೈತರ ಜೀವನ ನಿರ್ವಹಣೆಯ ಹಿತದೃಷ್ಟಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಹೆಸರನ್ನು ಕೈ ಬಿಟ್ಟು ನರೇಗಾ ಯೋಜನೆ ಮಾಡಿ ಸಂಪೂರ್ಣ ದಿಕ್ಕು ತಪ್ಪಿಸಿದೆ. ಇಂತಹ ಅವೈಜ್ಞಾನಿಕ ನೀತಿಯನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ನಮ್ಮ ಕಾಂಗ್ರೆಸ್ ಪಕ್ಷ ಹಾಗೂ ಇತರೆ ವಿರೋಧ ಪಕ್ಷಗಳೆಲ್ಲ ಸೇರಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
2005ರಲ್ಲಿ ನರೇಗಾ ಯೋಜನೆ ಆರಂಭವಾಗಿ ಇಲ್ಲಿಗೆ 20 ವರ್ಷಗಳು ಕಳೆದಿವೆ. ದೇಶದಲ್ಲಿ 5 ಕೋಟಿ ಬಡ ಕುಟುಂಬಗಳು ಈ ಯೋಜನೆಯಿಂದ ಜೀವನ ನಡೆಸುತ್ತಿದೆ ಹಾಗೂ ಆರ್ಥಿಕವಾಗಿ ಸಬಲವಾಗಿವೆ. ಜಾಬ್ ಕಾರ್ಡ್ ಹೊಂದಿರುವ ಎಲ್ಲ ಕೂಲಿಕಾರರು ನಮ್ಮ ಜತೆಯಲ್ಲಿ ಪ್ರತಿಭಟನೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಪ್ರಸ್ತುತ ನರೇಗಾ ಯೋಜನೆಯಲ್ಲಿ ಕೇಂದ್ರ ಸರ್ಕಾರ ನೂರು ದಿನಗಳ ಕೂಲಿಯನ್ನು ಜಮೆ ಮಾಡುತ್ತಾ ಬರುತ್ತಿದೆ. ಆದರೆ ಮುಂಬರುವ ಇದೇ ಹೊಸ ಯೋಜನೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ನರೇಗಾ ಕೂಲಿಕಾರರಿಗೆ ಕೂಲಿ ನೀಡಲು ರೂಪುರೇಷೆ ಮಾಡಿದೆ. ಆದರೆ ರಾಜ್ಯ ಸರ್ಕಾರಕ್ಕೆ ಹಣ ನೀಡಲು ಸಾಕಾಗುವುದಿಲ್ಲ. ಆದ್ದರಿಂದ ಕೇಂದ್ರ ಸರ್ಕಾರವೇ ಮುಂದುವರಿಸಿಕೊಂಡು ಹೋಗಬೇಕು ಎನ್ನುವುದು ಕಾಂಗ್ರೆಸ್ ಪಕ್ಷದ ನಿಲುವಾಗಿದೆ ಎಂದರು.
ಶಾಸಕ ಕೆ.ಎಸ್. ಬಸವಂತಪ್ಪ ಮಾತನಾಡಿ, ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಹೆಸರನ್ನು ಬದಲಿಸುವುದರೊಂದಿಗೆ ಯೋಜನೆಯನ್ನು ಸಂಪೂರ್ಣ ದಿಕ್ಕು ತಪ್ಪಿಸುತ್ತಿದೆ. ದೇಶದಲ್ಲಿರುವ ಕೂಲಿಕಾರರಿಗೆ ತೊಂದರೆ ಮಾಡಲು ಹೊರಟಿದೆ. ಆದ್ದರಿಂದ ಕೂಲಿಕಾರರು ಎಚ್ಚೆತ್ತುಕೊಂಡು ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದರು.
ತಾಪಂ ಇಒ ರಾಮಭೋವಿ ಸ್ವಾಗತಿಸಿದರು. ಪಿಡಿಒ ಎಸ್. ನಾಗರಾಜ್ ನಿರೂಪಿಸಿದರು.
ಜಿಪಂ ಸಿಇಒ ಗಿತ್ತೆ ಮಾಧವ ವಿಠಲರಾವ್, ಷಣ್ಮುಖಪ್ಪ, ಡಾ. ಮಂಜುನಾಥ್ ಪಾಟೀಲ್, ಬಿಎಫ್‌ಡಬ್ಲುೃಒ ರುದ್ರಸ್ವಾಮಿ, ಹೊನ್ನೂರು ಗ್ರಾಪಂ ಅಧ್ಯಕ್ಷೆ ನಾಗಮ್ಮ, ಡಾ. ದೇವರಾಜ್ ಪಟಗಿ, ಮುಖಂಡರಾದ ಹನುಮಂತಪ್ಪ, ಮೋಹನ್ ಕುಮಾರ್, ಬಸವರಾಜ್, ವೀರಪ್ಪ ಹಾಗೂ ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net