ಸಾಮಾನ್ಯ ಕಾರ್ಯಕರ್ತನಿಗೂ ಸಿಗಬೇಕು ಅಧಿಕಾರ

ಹೊನ್ನಾಳಿ ಪಟ್ಟಣದ ಜಿಪಂ ಮಾಜಿ ಸದಸ್ಯ ಎಂ.ಆರ್. ಮಹೇಶ್ ನಿವಾಸದಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದರು. ಅರಕೆರೆ ನಾಗರಾಜ್, ಸುರೇಶ್ ಜೆ.ಕೆ, ಕುಬೇಂದ್ರಪ್ಪ, ಚೀಲೂರು ಗಿರೀಶ್ ಇತರರಿದ್ದರು. authority
ಹೊನ್ನಾಳಿ ಪಟ್ಟಣದ ಜಿಪಂ ಮಾಜಿ ಸದಸ್ಯ ಎಂ.ಆರ್. ಮಹೇಶ್ ನಿವಾಸದಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದರು. ಅರಕೆರೆ ನಾಗರಾಜ್, ಸುರೇಶ್ ಜೆ.ಕೆ, ಕುಬೇಂದ್ರಪ್ಪ, ಚೀಲೂರು ಗಿರೀಶ್ ಇತರರಿದ್ದರು. authority
Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಸಚಿವ ರೇಣುಕಾಚಾರ್ಯ ಅನಿಸಿಕೆ
  • ಸಂಘಟನೆಯಲ್ಲಿ ಬಲಶಾಲಿ ಮಾಡೋಣ
  • ಪಕ್ಷದ ಮುಖಂಡರೊಂದಿಗೆ ಸಭೆ
ಹೊನ್ನಾಳಿ: ಕೇವಲ ನಾನೊಬ್ಬನೇ ಶಾಸಕನಾಗಬೇಕು ಎಂಬುದು ನನ್ನ ಗುರಿಯಲ್ಲ. ಬೂತ್ ಮಟ್ಟದಲ್ಲಿ ಪಕ್ಷಕ್ಕಾಗಿ ದುಡಿಯುವ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತನಿಗೂ ಅಧಿಕಾರ ಸಿಗಬೇಕು ಎಂಬುದು ನಮ್ಮ ಪಕ್ಷದ ನಿಲುವು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಜಿಪಂ ಮಾಜಿ ಸದಸ್ಯ ಎಂ.ಆರ್. ಮಹೇಶ್ ನಿವಾಸದಲ್ಲಿ ಭಾನುವಾರ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿ, ಸಾರ್ವತ್ರಿಕ ಚುನಾವಣೆಗೂ ಮುನ್ನ ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಪಂಚಾಯಿತಿ ಚುನಾವಣೆಗಳು ಬರುತ್ತವೆ. ಪಕ್ಷದ ಧ್ವಜ ಹಿಡಿದು ಸಂಘಟನೆಗೆ ಶ್ರಮಿಸಿದ ಕಾರ್ಯಕರ್ತರನ್ನು ಆ ಚುನಾವಣೆಗಳಲ್ಲಿ ಗೆಲ್ಲಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ತಾಲೂಕಿನಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಂಘಟನೆಯನ್ನು ಮತ್ತಷ್ಟು ಬಲಶಾಲಿ ಮಾಡಲಾಗುವುದು ಎಂದರು.
ಮಾಧ್ಯಮಗಳಲ್ಲಿ ನನಗೆ ನೋಟಿಸ್ ನೀಡಲಾಗಿದೆ ಎಂಬ ವದಂತಿ ಹಬ್ಬಿದ್ದು, ನಮಗೆ ಯಾವುದೇ ನೋಟಿಸ್ ಬಂದಿಲ್ಲ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ಅಗರ್ವಾಲ್ ಅವರು ನಮ್ಮನ್ನು ಕರೆದು ಸಂಘಟನೆಯ ಬಗ್ಗೆ ಮುಕ್ತವಾಗಿ ಚರ್ಚಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ರಾಜ್ಯ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ: ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಬರ ಆವರಿಸಿದೆ. ಸಾಲಸೋಲ ಮಾಡಿ ಬಿತ್ತನೆ ಮಾಡಿದ್ದ ರೈತರ ಬೆಳೆಗಳು ಒಣಗುತ್ತಿವೆ. ಆದರೆ, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ. ಅವರು ಕೇವಲ ಎರಡನೇ ಹಂತದ ಸಚಿವ ಸಂಪುಟ ರಚನೆಯ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆಯೇ ಹೊರತು ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ತಕ್ಷಣವೇ ಇಡೀ ರಾಜ್ಯವನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಮುಖಂಡ ಎಂ.ಆರ್. ಮಹೇಶ್ ಮಾತನಾಡಿ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ದಾವಣಗೆರೆಗೆ ಆಗಮಿಸಿದ್ದಾಗ ಸಣ್ಣಪುಟ್ಟ ಮನಸ್ತಾಪಗಳನ್ನು ಮರೆತು ಒಂದಾಗಲು ಸೂಚಿಸಿದ್ದರು. ಅದರಂತೆ ನಾವೆಲ್ಲರೂ ಒಂದಾಗಿದ್ದು, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರೊಂದಿಗೆ ಕೈಜೋಡಿಸಿ ಪಕ್ಷ ಸಂಘಟನೆ ಮಾಡಲಿದ್ದೇವೆ. 2028ರಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ ಎಂದರು.
ತಾಲೂಕು ಬಿಜೆಪಿ ಅಧ್ಯಕ್ಷ ಅರಕೆರೆ ನಾಗರಾಜ್, ನಿಕಟಪೂರ್ವ ಅಧ್ಯಕ್ಷ ಸುರೇಶ್ ಜೆ.ಕೆ, ಮುಖಂಡರಾದ ಕುಬೇಂದ್ರಪ್ಪ, ಚೀಲೂರು ಗಿರೀಶ್, ಮಾರಿಕೊಪ್ಪ ಹನುಮಂತಪ್ಪ, ಕುಳಗಟ್ಟೆ ರಂಗನಾಥ್, ಪುರಸಭೆ ಮಾಜಿ ಅಧ್ಯಕ್ಷ ಬಾಬು ಹೋಬಳದಾರ್, ಮಂಜು ಇಂಚರ, ತರಗನಹಳ್ಳಿ ರಮೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net