ನಾಳೆ ಕಟ್ಟಡ ಕಾಮಗಾರಿಗೆ ಅಡಿಗಲ್ಲು

ಹೊನ್ನಾಳಿಯ ಹಿರೇಕಲ್ಮಠದಲ್ಲಿ ಜು.1ರಂದು ನಡೆಯಲಿರುವ ವಿವಿಧ ಕಟ್ಟಡಗಳ ಭೂಮಿಪೂಜೆ ಕಾರ್ಯಕ್ರಮದ ಬೃಹತ್ ವೇದಿಕೆಯನ್ನು ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀ, ಶಾಸಕ ಡಿ.ಜಿ. ಶಾಂತನಗೌಡ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಎಚ್.ಎ. ಉಮಾಪತಿ, ಸುರೇಶ್ ಹೊಸಕೇರಿ ಇದ್ದರು.building works
ಹೊನ್ನಾಳಿಯ ಹಿರೇಕಲ್ಮಠದಲ್ಲಿ ಜು.1ರಂದು ನಡೆಯಲಿರುವ ವಿವಿಧ ಕಟ್ಟಡಗಳ ಭೂಮಿಪೂಜೆ ಕಾರ್ಯಕ್ರಮದ ಬೃಹತ್ ವೇದಿಕೆಯನ್ನು ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀ, ಶಾಸಕ ಡಿ.ಜಿ. ಶಾಂತನಗೌಡ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಎಚ್.ಎ. ಉಮಾಪತಿ, ಸುರೇಶ್ ಹೊಸಕೇರಿ ಇದ್ದರು.building works
Published on

ಪ್ರಮುಖ ಮುಖ್ಯಾಂಶಗಳು

  • ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀ ಹೇಳಿಕೆ
  • ಸಿದ್ಧತೆ ಪರಿಶೀಲನೆ
ಹೊನ್ನಾಳಿ: ಶಿವಾಚಾರ್ಯ ರತ್ನ ಲಿಂ. ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಶ್ರೀಗಳ 91ನೇ ವರ್ಷದ ಜಯಂತ್ಯುತ್ಸವದ ಸ್ಮರಣೆಗಾಗಿ ಹೊನ್ನಾಳಿ ಪಟ್ಟಣದಲ್ಲಿ ಹೈಟೆಕ್ ಆಸ್ಪತ್ರೆ, ನರ್ಸಿಂಗ್ ಕಾಲೇಜು, ಫಾರ್ಮಸಿ ಕಾಲೇಜು, ಸೈನಿಕ ಶಾಲೆ, ಸಿಬಿಎಸ್‌ಇ ಶಾಲೆ ಹಾಗೂ ಗೋಸಂವರ್ಧನ ಕೇಂದ್ರದ ಕಟ್ಟಡಗಳ ಭೂಮಿಪೂಜೆ ಮತ್ತು ಶಿಲಾಫಲಕ ಅನಾವರಣ ಕಾರ್ಯಕ್ರಮ ಜು.1ರಂದು ನಡೆಯಲಿದೆ ಎಂದು ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಹಿರೇಕಲ್ಮಠದ ಆವರಣದಲ್ಲಿ ಭಾನುವಾರ ಕಾರ್ಯಕ್ರಮದ ವೇದಿಕೆ ಹಾಗೂ ಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿ, ಜೂ.30ರಂದು ಲಿಂ. ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಶ್ರೀಗಳ ಕರ್ತೃ ಗದ್ದುಗೆಗೆ ಮಹಾ ರುದ್ರಾಭಿಷೇಕ, ಬಿಲ್ವಾರ್ಚನೆ ಹಾಗೂ ಮಹಾ ಮಂಗಳಾರತಿ ಜರುಗಲಿದೆ. ನಂತರ ಶ್ರೀಮಠದಲ್ಲಿ ವಿದ್ಯಾಭ್ಯಾಸ ಮಾಡಿ ಪ್ರಸ್ತುತ ನಾಡಿನ ವಿವಿಧ ಮಠಗಳ ಪೀಠಾಧಿಪತಿಗಳಾಗಿರುವ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಧಾರ್ಮಿಕ ಹಾಗೂ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಜು.1ರಂದು ನಡೆಯುವ ವಿವಿಧ ಶಿಕ್ಷಣ ಸಂಸ್ಥೆ ಹಾಗೂ ಆಸ್ಪತ್ರೆ ಕಟ್ಟಡಗಳ ಶಂಕುಸ್ಥಾಪನೆ ಕಾರ್ಯಕ್ರಮವು ರಂಭಾಪುರಿ ಪೀಠದ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಉಜ್ಜಯಿನಿ ಪೀಠದ ಸಿದ್ಧಲಿಂಗರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು, ಕಾಶಿ ಜ್ಞಾನಪೀಠದ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಹಾಗೂ ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಶ್ರೀಗಳ ಸಾನ್ನಿಧ್ಯದಲ್ಲಿ ಜರುಗಲಿದೆ ಎಂದು ತಿಳಿಸಿದರು.
ಈ ಸಮಾರಂಭಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ರಾಜ್ಯ ಸಚಿವ ಈಶ್ವರ ಖಂಡ್ರೆ, ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಡಾ.ಸಿ.ಎನ್. ಮಂಜುನಾಥ್, ಬಿ.ವೈ. ರಾಘವೇಂದ್ರ, ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕರಾದ ಡಿ.ಜಿ. ಶಾಂತನಗೌಡ, ಬಿ.ಪಿ. ಹರೀಶ್, ಬಸವರಾಜ ಶಿವಗಂಗಾ, ಸಮರ್ಥ ಶಾಮನೂರು, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜೆ.ಬಿ. ವಿನಯಕುಮಾರ್ ಸೇರಿ ಇತರರು ಉಪಸ್ಥಿತರಿರುವರು ಎಂದರು.
ಈ ಸಂದರ್ಭದಲ್ಲಿ ಶಾಸಕ ಡಿ.ಜಿ. ಶಾಂತನಗೌಡ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಎಚ್.ಎ. ಉಮಾಪತಿ, ಸುರೇಶ್ ಹೊಸಕೇರಿ, ಕತ್ತಿಗೆ ನಾಗರಾಜ್, ವೀರಣ್ಣಕುಮಾರಸ್ವಾಮಿ, ರಾಜು ಪಲ್ಲವಿ ಇತರರಿದ್ದರು.

ವೈದ್ಯರು, ಪತ್ರಕರ್ತರಿಗೆ ಸನ್ಮಾನ

ಜು.1ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ಪತ್ರಿಕಾ ದಿನಾಚರಣೆ ಇರುವುದರಿಂದ ಈ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕ ವೈದ್ಯರನ್ನು ಹಾಗೂ ಪತ್ರಕರ್ತರನ್ನು ಶ್ರೀಮಠದ ವತಿಯಿಂದ ಸನ್ಮಾನಿಸಲಾಗುವುದು. ಇದೇ ವೇಳೆ ಲಿಂ. ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಶ್ರೀಗಳ ನೂರೆಂಟು ನಾಮಾವಳಿ ಕಿರುಕೃತಿ ಬಿಡುಗಡೆಯಾಗಲಿದೆ. ನಂತರ ಅಂತಾರಾಷ್ಟ್ರೀಯ ಭರತನಾಟ್ಯ ಕಲಾವಿದೆ ಡಾ. ಮಂಜರಿ ಮತ್ತು ಬಳಗ, ಸರಿಗಮಪ ಗಾಯಕ ಯಶವಂತ್ ಮತ್ತು ಬಳಗದಿಂದ ಸಂಗೀತ ಸಂಜೆ ಹಾಗೂ ಅಭಿನೇತ್ರಿ ಡ್ಯಾನ್ಸ್ ಮ್ಯೂಸಿಕ್ ಅಕಾಡೆಮಿ ಮತ್ತು ಕುಮಾರಿ ಕವನ ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಸ್ವಾಮೀಜಿ ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net