ಗುಣಮಟ್ಟದ ಶಿಕ್ಷಣದಲ್ಲಿ ಜಿಎಂಯು ಮುಂಚೂಣಿ

ದಾವಣಗೆರೆಯ ಜಿ.ಎಂ. ವಿಶ್ವವಿದ್ಯಾಲಯದಲ್ಲಿ ಶುಕ್ರವಾರ, ಕೇಂದ್ರದ ಮಾಜಿ ಸಚಿವ ಡಾ. ಜಿ.ಎಂ. ಸಿದ್ದೇಶ್ವರ ಅವರು ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು. ಗಾಯತ್ರಿ ಸಿದ್ದೇಶ್ವರ, ಜಿ.ಎಂ. ಪ್ರಸನ್ನ ಕುಮಾರ್, ಜಿ.ಎಸ್. ಅನಿತ್ ಕುಮಾರ್, ವೈ.ಯು. ಸುಭಾಷ, ಗಾಯತ್ರಿ ಸುಭಾಷ್, ಪ್ರಮೀಳಾ ನಟರಾಜ್, ರಾಜೀವ್, ಮಾಗನೂರು ಆರ್. ಪ್ರಭುದೇವ್ ಇದ್ದರು.
ದಾವಣಗೆರೆಯ ಜಿ.ಎಂ. ವಿಶ್ವವಿದ್ಯಾಲಯದಲ್ಲಿ ಶುಕ್ರವಾರ, ಕೇಂದ್ರದ ಮಾಜಿ ಸಚಿವ ಡಾ. ಜಿ.ಎಂ. ಸಿದ್ದೇಶ್ವರ ಅವರು ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು. ಗಾಯತ್ರಿ ಸಿದ್ದೇಶ್ವರ, ಜಿ.ಎಂ. ಪ್ರಸನ್ನ ಕುಮಾರ್, ಜಿ.ಎಸ್. ಅನಿತ್ ಕುಮಾರ್, ವೈ.ಯು. ಸುಭಾಷ, ಗಾಯತ್ರಿ ಸುಭಾಷ್, ಪ್ರಮೀಳಾ ನಟರಾಜ್, ರಾಜೀವ್, ಮಾಗನೂರು ಆರ್. ಪ್ರಭುದೇವ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕೇಂದ್ರದ ಮಾಜಿ ಸಚಿವ ಸಿದ್ದೇಶ್ವರ ಹರ್ಷ
  • ವಿವಿಯಲ್ಲಿ ಸಂಭ್ರಮದ ಜನ್ಮ ದಿನಾಚರಣೆ
ದಾವಣಗೆರೆ : ಜಿ.ಎಂ. ವಿಶ್ವವಿದ್ಯಾಲಯವು ಹಾವೇರಿ, ಶಿವಮೊಗ್ಗ, ಚಿತ್ರದುರ್ಗ ಹಾಗೂ ದಾವಣಗೆರೆ ಸೇರಿ ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ಪ್ರಥಮ ಸ್ಥಾನದಲ್ಲಿದ್ದು, ಗುಣಮಟ್ಟದ ಶಿಕ್ಷಣ ಮತ್ತು ಕ್ಯಾಂಪಸ್ ಆಯ್ಕೆಯಲ್ಲಿ ಮುಂಚೂಣಿಯಲ್ಲಿದೆ ಎಂದು, ಕೇಂದ್ರದ ಮಾಜಿ ಸಚಿವ, ಮಾಜಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ ಹೇಳಿದರು.
ನಗರದ ಜಿ.ಎಂ. ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ, ತಮ್ಮ 74ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿಶ್ವವಿದ್ಯಾಲಯದ ಈ ಸಾಧನೆಗೆ ಕುಲಪತಿ, ಉಪ ಕುಲಪತಿ, ಕುಲಸಚಿವ, ಪ್ರಾಚಾರ್ಯರು, ಡೀನ್‌ಗಳು, ನಿರ್ದೇಶಕರು, ಮುಖ್ಯಸ್ಥರು ಹಾಗೂ ಬೋಧಕ, ಬೋಧಕೇತರ ವರ್ಗದವರ ಶ್ರಮವೇ ಪ್ರಮುಖ ಕಾರಣ ಎಂದು ಶ್ಲಾಘಿಸಿದರು.
ವಿದ್ಯಾರ್ಥಿಗಳು ಕಲ್ಲಿನಂತಿದ್ದು, ಶಿಕ್ಷಕರು ಅವರನ್ನು ಶಿಲ್ಪಿಯಂತೆ ಕೆತ್ತಿ ಸುಂದರ ಮೂರ್ತಿಯನ್ನಾಗಿ ಮಾಡಬೇಕು. ಕೇವಲ ಸಂಬಳಕ್ಕಾಗಿ ಕೆಲಸ ಮಾಡದೆ, ಸಂಸ್ಥೆಯನ್ನು ತಮ್ಮದೇ ಎಂಬ ಭಾವನೆಯಿಂದ ಬೆಳೆಸಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಜ್ಞಾನ ನೀಡಿ, ಕ್ಯಾಂಪಸ್ ಆಯ್ಕೆಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಉದ್ಯೋಗ ಪಡೆಯುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಪ್ರಾಧ್ಯಾಪಕರ ಹೊಣೆ. ಆ ಮೂಲಕ ರಾಜ್ಯದಲ್ಲೇ ಜಿಎಂ ವಿಶ್ವವಿದ್ಯಾಲಯ ಹೆಸರುವಾಸಿಯಾಗುವಂತೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಕಳೆದ ಶೈಕ್ಷಣಿಕ ವರ್ಷದಲ್ಲಿ 10,500 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರು. ಈ ವರ್ಷ ಆ ಸಂಖ್ಯೆ 12,000ದಿಂದ 12,500ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ. ಮುಂದಿನ 3-4 ವರ್ಷಗಳಲ್ಲಿ ವಿಶ್ವವಿದ್ಯಾಲಯದಲ್ಲಿ 15,000ದಿಂದ 20,000 ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಗುರಿಯನ್ನು ಆಡಳಿತ ಮಂಡಳಿ ಹೊಂದಿದೆ. 1999-2000ನೇ ಇಸವಿಯಲ್ಲಿ ಕೇವಲ 10 ಎಕರೆ ಜಾಗದಲ್ಲಿ ಪ್ರಾರಂಭವಾದ ಸಂಸ್ಥೆ, ಹಂತ ಹಂತವಾಗಿ ಬೆಳೆದು ಇಂದು 52 ಎಕರೆಗಳ ವಿಶಾಲ ಕ್ಯಾಂಪಸ್ ಆಗಿ ರೂಪುಗೊಂಡಿದೆ ಎಂದರು.
ರ‌್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಹೆಸರಿಗಷ್ಟೇ ಅಲ್ಲದೆ, ತಲಾ 10 ಗ್ರಾಂ ತೂಕದ ನೈಜ ಚಿನ್ನದ ಪದಕಗಳನ್ನು ನೀಡಿ ಗೌರವಿಸುವ ಮೂಲಕ ಸಂಸ್ಥೆಯು ತನ್ನ ಬದ್ಧತೆಯನ್ನು ಮೆರೆದಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಉನ್ನತ ಶ್ರೇಣಿ ಪಡೆದ ಬಡತನದ ಹಿನ್ನೆಲೆಯ ನಾಲ್ವರು ವಿದ್ಯಾರ್ಥಿಗಳಿಗೆ, ಅವರು ಪಾವತಿಸಿದ್ದ ಸಂಪೂರ್ಣ ಶುಲ್ಕವನ್ನು ವಾಪಸ್ ನೀಡಿದ್ದನ್ನು ನೆನಪಿಸಲಾಯಿತು.
ಇದೇ ವೇಳೆ ಜಿ.ಎಂ. ಸಿದ್ದೇಶ್ವರ ಅವರು, ಜಿಎಂ ಶೈಕ್ಷಣಿಕ ಸಮೂಹ ಸಂಸ್ಥೆಗಳ ಬಳಗದ ಗಣ್ಯರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ, ಸಿಹಿ ವಿನಿಮಯ ಮಾಡಿಕೊಂಡರು.
ಸಹ-ಕುಲಪತಿ ಡಾ. ಎಂ. ವೇಣುಗೋಪಾಲ ರಾವ್, ಕುಲಸಚಿವ ಡಾ. ಸುನೀಲ್ ಕುಮಾರ್ ಬಿ.ಎಸ್. ಅವರು, ಸಿದ್ದೇಶ್ವರ ಅವರ ವಿಶೇಷ ಸಾಧನೆಯನ್ನು ಮೆಲುಕು ಹಾಕಿದರು.
ಜಿ.ಎಂ. ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ, ಶ್ರೀಶೈಲ ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷ ಜಿ.ಎಂ. ಪ್ರಸನ್ನ ಕುಮಾರ್, ಖಜಾಂಚಿ ಜಿ.ಎಸ್. ಅನಿತ್ ಕುಮಾರ್, ಆಡಳಿತಾಧಿಕಾರಿಗಳಾದ ವೈ.ಯು. ಸುಭಾಷ, ಗಾಯತ್ರಿ ಸುಭಾಷ್, ಪ್ರಮೀಳಾ ನಟರಾಜ್, ಜಿಎಂ ವಿಶ್ವವಿದ್ಯಾಲಯದ ಕುಲಾಧಿಪತಿ ಜಿ.ಎಂ. ಲಿಂಗರಾಜ್ ಅವರ ಪುತ್ರ ರಾಜೀವ್, ಜಿಎಂ ಸೌಹಾರ್ದ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಇದ್ದರು.
ವೈಷ್ಣವಿ ಕೆ. ಮತ್ತು ವಿನುತಾ ಯು. ಪ್ರಾರ್ಥಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜೇಶ್ವರಿ ವೈ.ಎಂ. ನಿರೂಪಿಸಿದರು. ಎಫ್‌ಸಿಐಟಿ ವಿಭಾಗದ ಡೀನ್ ಡಾ. ಶ್ವೇತಾ ಮರಿಗೌಡರ್ ವಂದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಜಿ.ಎಂ. ಸಿದ್ದೇಶ್ವರ ಅವರು ತಮ್ಮ ಜನ್ಮದಿನದ ಪ್ರಯುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿ ಹಣ್ಣು ಮತ್ತು ಪರಿಸರಸ್ನೇಹಿ ಸಸಿಗಳನ್ನು ನೆಟ್ಟು ಪ್ರಕೃತಿ ಪ್ರೇಮ ಮೆರೆದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net