ಈ ಹಂತದಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ತಳ್ಳಾಟ ಮತ್ತು ನೂಕಾಟ ನಡೆದು ಸ್ಥಳದಲ್ಲಿ ತೀವ್ರ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು. ಕಾಂಗ್ರೆಸ್ ಮುಖಂಡರು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ರೇಣುಕಾಚಾರ್ಯ ಮತ್ತು ಬಿಜೆಪಿ ಮುಖಂಡರನ್ನು ಬಂಧಿಸುವಂತೆ ಒತ್ತಾಯಿಸಿದರೆ, ಪ್ರತಿಭಟನೆಯಲ್ಲಿ ತೊಡಗಿದ್ದ ರೇಣುಕಾಚಾರ್ಯ ಮತ್ತು ಬಿಜೆಪಿ ಕಾರ್ಯಕರ್ತರು, ತಮ್ಮ ಶಾಂತಿಯುತ ಬಂದ್‌ಗೆ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್ ಮುಖಂಡರನ್ನು ಬಂಧಿಸಬೇಕು ಎಂದು ಪೊಲೀಸರನ್ನು ಒತ್ತಾಯಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಬಸ್‌ಗಳು ಪಟ್ಟಣದ ಒಳಗೆ ಬರಲು ಅವಕಾಶ ನೀಡಲು ಪ್ರಯತ್ನಿಸಿದಾಗ, ಬಿಜೆಪಿ ಮುಖಂಡರು ಕೆರಳಿ ಬಸ್‌ಗಳನ್ನು ತಡೆಯಲು ಮುಂದಾದರು.