ಮಾ.13 ರಿಂದ ರಾಜ್ಯಾದ್ಯಂತ ಈ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಗೆ 15,175 ಡೋಸ್ ಲಸಿಕೆ ಬಂದಿದ್ದು, ಮೊದಲ ಹಂತದಲ್ಲಿ 7,535, ಎರಡನೇ ಹಂತದಲ್ಲಿ 7,640 ಡೋಸ್ ಲಭ್ಯವಾಗಿದೆ. ಇದುವರೆಗೆ ಜಿಲ್ಲೆಯಲ್ಲಿ 3,570 ಹೆಣ್ಣುಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಿಎಚ್‌ಒ ಡಾ. ಷಣ್ಮುಖಪ್ಪ ಹಾಗೂ ಆಸ್ಪತ್ರೆ ಅಧೀಕ್ಷಕ ಡಾ. ಮಧು ಇತರರಿದ್ದರು.