ಮನುಷ್ಯರಲ್ಲಿವೆ ದೈವೀ- ಅಸುರೀ ಗುಣ

ಹರಿಹರದಲ್ಲಿ ಶನಿವಾರ ಆಯೋಜಿಸಿದ್ದ ಲಿಂ. ಉಜ್ಜಯಿನಿ ಸಿದ್ಧಲಿಂಗ ಶ್ರೀಗಳ ತಪಸ್ಸು, ಸಾಧನೆಯ ಶತಮಾನೋತ್ಸವ ಸಮಾರಂಭವನ್ನು ಶಾಸಕ ಬಿ.ಪಿ. ಹರೀಶ್ ಉದ್ಘಾಟಿಸಿದರು. ಡಾ. ರಂಭಾಪುರಿ ಶ್ರೀಗಳು, ಆವರಗೊಳ್ಳ ಹಿರೇಮಠದ ಓಂಕಾರ ಶಿವಾಚಾರ್ಯರು, ಫೌಂಡೇಶನ್ ಉಪಾಧ್ಯಕ್ಷ ಪ್ರೊ.ಸಿ.ವಿ. ಪಾಟೀಲ್ ಇತರರಿದ್ದರು.
ಹರಿಹರದಲ್ಲಿ ಶನಿವಾರ ಆಯೋಜಿಸಿದ್ದ ಲಿಂ. ಉಜ್ಜಯಿನಿ ಸಿದ್ಧಲಿಂಗ ಶ್ರೀಗಳ ತಪಸ್ಸು, ಸಾಧನೆಯ ಶತಮಾನೋತ್ಸವ ಸಮಾರಂಭವನ್ನು ಶಾಸಕ ಬಿ.ಪಿ. ಹರೀಶ್ ಉದ್ಘಾಟಿಸಿದರು. ಡಾ. ರಂಭಾಪುರಿ ಶ್ರೀಗಳು, ಆವರಗೊಳ್ಳ ಹಿರೇಮಠದ ಓಂಕಾರ ಶಿವಾಚಾರ್ಯರು, ಫೌಂಡೇಶನ್ ಉಪಾಧ್ಯಕ್ಷ ಪ್ರೊ.ಸಿ.ವಿ. ಪಾಟೀಲ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಂಭಾಪುರಿ ಶ್ರೀಗಳ ವಿಶ್ಲೇಷಣೆ
  • ಉಜ್ಜಯಿನಿ ಶ್ರೀಗಳ ತಪಸ್ಸು ಸಾಧನೆಯ ಶತಮಾನೋತ್ಸವ
  • ಅಂತರಂಗ ಬಹಿರಂಗ ಶುದ್ಧಿಯಿಂದ ಬದುಕಿಗೆ ಶ್ರೇಯಸ್ಸು
ಹರಿಹರ: ವೀರಶೈವ ಧರ್ಮದ ತತ್ವತ್ರಯಗಳ ಪರಿಪಾಲನೆಯಿಂದ ಸುಖ ಶಾಂತಿ ಪ್ರಾಪ್ತಿಯಾಗುತ್ತದೆ ಎಂದು ಬಾಳೆಹೊನ್ನೂರು ರಂಭಾಪುರಿ ಡಾ. ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.
ನಗರದ ಸಿದ್ದೇಶ್ವರ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಶನಿವಾರ ಶ್ರೀ ಮಹಾತಪಸ್ವಿ ಫೌಂಡೇಶನ್ ಆಯೋಜಿಸಿದ್ದ ಲಿಂ.ಶ್ರೀ ಉಜ್ಜಯಿನಿ ಸಿದ್ದಲಿಂಗ ಜಗದ್ಗುರುಗಳ ತಪಸ್ಸು ಸಾಧನೆಯ ಶತಮಾನೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಲಿಂ. ಉಜ್ಜಯಿನಿ ಸಿದ್ದಲಿಂಗ ಜಗದ್ಗುರುಗಳು ಪರಿಪಕ್ವ ಸಮಾಜ ನಿರ್ಮಾಣ ಕಾರ್ಯವೇ ನಿಜವಾದ ಧರ್ಮವೆಂದರಿತು ಬದುಕಿನ ಹಿರಿಮೆ ಮತ್ತು ರಹಸ್ಯ ಬೋಧಿಸಿದರು. ಅಂತರಂಗ ಬಹಿರಂಗ ಶುದ್ಧಿಯಿಂದ ಬದುಕಿಗೆ ಶ್ರೇಯಸ್ಸು ದೊರಕುವುದೆಂದು ಸಾರಿದರು. ಅಲ್ಲದೇ ಜೀವನದ ಜಂಜಾಟಗಳಲ್ಲಿ ಸಿಲುಕಿದವರಿಗೆ ಆದರ್ಶ ಸಂಸ್ಕಾರ ಮತ್ತು ಸದ್ವಿಚಾರ ಬೋಧಿಸಿ ಅವರಲ್ಲಿ ಸ್ಫೂರ್ತಿ ಮತ್ತು ಚೈತನ್ಯ ಶಕ್ತಿಯನ್ನು ಹೆಚ್ಚಿಸಿದರು ಎಂದರು.
ಮಾನವರಲ್ಲಿ ದೈವೀ ಮತ್ತು ಅಸುರೀ ಗುಣಗಳಿವೆ. ದೈವೀ ಗುಣಗಳು ಸಂಸಾರ ಸಾಗರದಿಂದ ಪಾರು ಮಾಡಿ ಸುಖ ಸಾಗರದತ್ತ ಕರೆದುಕೊಂಡು ಹೋಗುತ್ತದೆ. ಅಸುರೀ ಗುಣಗಳು ದುಃಖದ ಕಡಲಿನಲ್ಲಿ ಮುಳುಗಿಸಿ ಬಿಡುತ್ತದೆ. ದೈವೀ ಗುಣಗಳ ಸಂವರ್ಧನೆಗಾಗಿ ಲಿಂ. ಉಜ್ಜಯಿನಿ ಸಿದ್ದಲಿಂಗ ಜಗದ್ಗುರುಗಳು ಶ್ರಮಿಸಿದರು ಎಂದು ಹರ್ಷ ವ್ಯಕ್ತಪಡಿಸಿದರು.
ಅವಧೂತ ಕವಿ ಗುರುರಾಜ ಗುರೂಜಿ ಮಾತನಾಡಿ, ಉದಾತ್ತವಾದ ಜೀವನ ಮೌಲ್ಯಗಳನ್ನು ಪರಿಪಾಲಿಸಿ ಜನ ಸಮುದಾಯದ ಶ್ರೇಯಸ್ಸಿಗೆ ನಿರಂತರ ಕೃಷಿಗೈದವರು. ಹಸಿವೆ ತೃಷೆಗಳನ್ನು ಮರೆತು ಭಕ್ತ ಸಂಕುಲದ ಒಳಿತಿಗಾಗಿ ತಪಗೈದ ಸಿದ್ಧಿ ಪುರುಷರ ಶತಮಾನೋತ್ಸವ ಆಚರಿಸುತ್ತಿರುವುದು ನಮ್ಮೆಲ್ಲರ ಸೌಭಾಗ್ಯವೆಂದರು.
ಅವರಗೊಳ್ಳ ಹಿರೇಮಠದ ಓಂಕಾರ ಶಿವಾಚಾರ್ಯರು, ಹಂಪಸಾಗರ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯರು, ಪುಣ್ಯಕೋಟಿ ಮಠದ ಜಗದೀಶ್ವರ ಶ್ರೀಗಳು ನುಡಿ ನಮನ ಸಲ್ಲಿಸಿದರು.
ಇದೇ ವೇಳೆ ಪ್ರೊ.ಎಸ್.ಎಂ. ಗಂಗಾಧರಯ್ಯ ಮಹಾತಪಸ್ವಿ ಫೌಂಡೇಶನ್‌ನ 10 ವರ್ಷದ ಅಭಿಯಾನದ ಸಮಗ್ರ ನೋಟ ಗ್ರಂಥ ಬಿಡುಗಡೆಗೊಳಿಸಲಾಯಿತು. ದಾವಣಗೆರೆ ಅಶ್ವಿನಿ ಆಯುರ್ವೇದ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ಯು.ಎಂ. ಜ್ಞಾನೇಶ್ವರ ಅವರಿಗೆ ಆಯುರ್ ತಪೋಜ್ಞಾನರತ್ನ ಪ್ರಶಸ್ತಿಯನ್ನು ರಂಭಾಪುರಿ ಶ್ರೀಗಳು ಪ್ರದಾನ ಮಾಡಿದರು.
ಫೌಂಡೇಶನ್ ಉಪಾಧ್ಯಕ್ಷ ಪ್ರೊ.ಸಿ.ವಿ. ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಡಾ.ಹಾ.ಮಾ. ನಾಗಾರ್ಜುನ ಪ್ರಾಸ್ತಾವಿಕ ಮಾತನಾಡಿದರು. ನಿವೃತ್ತ ಪ್ರಾಚಾರ್ಯ ಪ್ರೊ.ಎಚ್.ಎ. ಭಿಕ್ಷಾವರ್ತಿಮಠ, ಡಿ.ಜಿ. ಶಿವಾನಂದಪ್ಪ, ಜಗದೀಶ್ ಬಣಕಾರ್, ಎ.ಬಿ.ಸಿ. ವಿಜಯಕುಮಾರ್ ಇತರರು ಹಾಜರಿದ್ದರು.
"

ಮನುಷ್ಯನು ಮಾನವತೆಯಿಂದ ದೈವತ್ವಕ್ಕೆ ಏರುವುದು ಸುಲಭವಲ್ಲ. ಇದಕ್ಕಾಗಿ ಶ್ರಮ, ಪ್ರಯತ್ನ ಇರಬೇಕಾಗುತ್ತದೆ. ಅಧ್ಯಾತ್ಮ ಲೋಕದಲ್ಲಿ ಅನೇಕ ಆಧ್ಯಾತ್ಮಿಕ ಪುರುಷರನ್ನು ಇತಿಹಾಸದಲ್ಲಿ ಕಾಣುತ್ತೇವೆ. ಅಂಥ ಸಿದ್ಧಿ ಪುರುಷರಲ್ಲಿ ಲಿಂ. ಉಜ್ಜಯಿನಿ ಸಿದ್ಧಲಿಂಗ ಶ್ರೀಯನ್ನು ಕಾಣಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net