ಕೃಷಿ ಕ್ಷೇತ್ರದ ಪ್ರಗತಿಗೆ ಮೂಲಸೌಲಭ್ಯ

ನವದೆಹಲಿಯ ಸಂಸತ್ ಭವನದ ಸಭಾಂಗಣದಲ್ಲಿ ಮಂಗಳವಾರ ನಡೆದ ಸಂಸತ್ತಿನ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಸಮಿತಿ ಸದಸ್ಯರು ಇದ್ದರು.
ನವದೆಹಲಿಯ ಸಂಸತ್ ಭವನದ ಸಭಾಂಗಣದಲ್ಲಿ ಮಂಗಳವಾರ ನಡೆದ ಸಂಸತ್ತಿನ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಸಮಿತಿ ಸದಸ್ಯರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅಭಿಮತ
  • ಸಂಸತ್ತಿನ ಸರ್ಕಾರಿ ಭರವಸೆಗಳ ಸಮಿತಿ ಸಭೆ
ದಾವಣಗೆರೆ : ರೈತರು ದೇಶದ ಬೆನ್ನೆಲುಬಾಗಿದ್ದು, ಕೃಷಿ ಕ್ಷೇತ್ರದ ಪ್ರಗತಿಗೆ ಅಗತ್ಯವಾದ ಮೂಲ ಸೌಲಭ್ಯಗಳು ಮತ್ತು ಸರ್ಕಾರದ ಭರವಸೆಗಳ ಪರಿಣಾಮಕಾರಿ ಅನುಷ್ಠಾನದ ಅಗತ್ಯವಿದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯ ವ್ಯಕ್ತಪಡಿಸಿದರು.
ನವದೆಹಲಿಯ ಸಂಸತ್ ಭವನದ ಸಭಾಂಗಣದಲ್ಲಿ ಮಂಗಳವಾರ ನಡೆದ ಸಂಸತ್ತಿನ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಮಾತನಾಡಿದರು.
ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ರೈತರ ಹಿತಾಸಕ್ತಿಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.
ರಸಗೊಬ್ಬರಗಳು ಹಾಗೂ ಕೀಟನಾಶಕಗಳ ಲಭ್ಯತೆ ಮತ್ತು ವಿತರಣೆ, ಪೊಟ್ಯಾಷ್ ದರಗಳು, ಮಣ್ಣಿನ ಆರೋಗ್ಯ ಪರೀಕ್ಷಾ ಕಾರ್ಡ್‌ಗಳ ವಿತರಣೆ, ನ್ಯಾನೋ ರಸಗೊಬ್ಬರಗಳ ಪರಿಣಾಮ, ರಸಗೊಬ್ಬರ ಉತ್ಪಾದನಾ ಕಂಪನಿಗಳ ಸಂಖ್ಯೆ ಸೇರಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.
ಈ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಬಾಕಿ ಉಳಿದಿರುವ ಭರವಸೆಗಳ ಅನುಷ್ಠಾನ ಸ್ಥಿತಿಯನ್ನು ಸಮಿತಿ ಪರಿಶೀಲಿಸಿತು. ರೈತರಿಗೆ ಅಗತ್ಯವಾದ ರಸಗೊಬ್ಬರಗಳ ಸಮರ್ಪಕ ಪೂರೈಕೆಯನ್ನು ಖಚಿತಪಡಿಸುವುದು, ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು ಹಾಗೂ ರೈತಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸದಸ್ಯರು ಅಭಿಪ್ರಾಯ ವಿನಿಮಯ ಮಾಡಿಕೊಂಡರು.
ಸರ್ಕಾರದ ಭರವಸೆಗಳು ಜನಸಾಮಾನ್ಯರಿಗೆ ತಲುಪುವಲ್ಲಿ ಆಗಿರುವ ಪ್ರಗತಿ ಹಾಗೂ ಅವುಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸುವ ಉದ್ದೇಶದಿಂದ ಸಭೆಯಲ್ಲಿ ವಿವಿಧ ಇಲಾಖೆಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಅಗತ್ಯ ಸಲಹೆ, ಸೂಚನೆಗಳನ್ನು ನೀಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net