ಹೊನ್ನಾಳಿ ಅರಬಗಟ್ಟೆ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಾಚಾರ್ಯರು, ಮುಖ್ಯಶಿಕ್ಷಕರು ಮತ್ತು ಎಸ್‌ಡಿಎಂಸಿ ಅಧ್ಯಕ್ಷರ ಸಭೆಯಲ್ಲಿ ಬಿಇಒ ನಿಂಗಪ್ಪ, ಗ್ರಾಪಂ ಅಧ್ಯಕ್ಷ ಮಂಜಪ್ಪ, ಪ್ರಾಚಾರ್ಯ ಚಂದ್ರೇಗೌಡ, ಮುಖ್ಯಶಿಕ್ಷಕ ಮಂಜಪ್ಪ ಇದ್ದರು.
ಪ್ರಾಚಾರ್ಯರು, ಮುಖ್ಯಶಿಕ್ಷಕರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರ ಸಭೆ
ಒಂದೇ ಸೂರಿನಡಿ ಶಿಕ್ಷಣ ನೀಡುವ ಚಿಂತನೆ
ಹೊನ್ನಾಳಿ:ಪ್ರಸ್ತುತ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಲ್ಲಿ 3 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ನಿರ್ದೇಶನ ನೀಡಿದೆ ಎಂದು ಬಿಇಒ ನಿಂಗಪ್ಪ ತಿಳಿಸಿದರು.
ತಾಲೂಕಿನ ಅರಬಗಟ್ಟೆ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಾಚಾರ್ಯರು, ಮುಖ್ಯಶಿಕ್ಷಕರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದರು.
ಸುಸಜ್ಜಿತ ಕಟ್ಟಡ, ಗುಣಮಟ್ಟದ ಶಿಕ್ಷಣ ಹಾಗೂ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚು ಮಾಡುವ ನಿಟ್ಟಿನಲ್ಲಿ ಸರ್ಕಾರ ಹೊನ್ನಾಳಿ ತಾಲೂಕಿನ ಅರಬಗಟ್ಟೆ, ಯರೇಚಿಕ್ಕನಹಳ್ಳಿ ಹಾಗೂ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ಕೆಪಿಎಸ್ ಶಾಲೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ. ಪೂರ್ವ ಪ್ರಾಥಮಿಕದಿಂದ ಪಿಯುಸಿವರೆಗೂ ಒಂದೇ ಸೂರಿನಡಿ ಮಕ್ಕಳಿಗೆ ಶಿಕ್ಷಣ ನೀಡಲು ಸರ್ಕಾರ ಚಿಂತನೆ ನಡೆಸಿ ಅವಳಿ ತಾಲೂಕಿಗೆ ಮೂರು ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಿದೆ ಎಂದರು.
ಕೆಪಿಎಸ್ ಶಾಲೆ ಮಂಜೂರಾಗಿರುವ ಮೂರು ಶಾಲೆಗಳ 5 ಕಿಮೀ ವ್ಯಾಪ್ತಿಯಲ್ಲಿ ಬರುವ ಎಲ್ಲ ಶಾಲೆಗಳನ್ನು ಈ ಕೆಪಿಎಸ್ ಶಾಲೆಗಳಿಗೆ ಮರ್ಜ್ ಮಾಡಲಾಗುವುದು. ಈ ಬಗ್ಗೆ ಶಾಲೆಯ ಎಸ್‌ಡಿಎಂಸಿ ಹಾಗೂ ಗ್ರಾಮಸ್ಥರ ಸಭೆ ಮಾಡಿ, ಅವರ ಅಭಿಪ್ರಾಯಗಳನ್ನು ಬಿಇಒ ಕಚೇರಿಗೆ ವರದಿ ಮಾಡಬೇಕು ಎಂದು ಮುಖ್ಯಶಿಕ್ಷಕರಿಗೆ ಸೂಚಿಸಿದರು. 5 ಕಿಮೀ ವ್ಯಾಪ್ತಿಯಿಂದ ಬರುವ ಸರ್ಕಾರಿ ಶಾಲೆ ಮಕ್ಕಳಿಗೆ ಕೆಪಿಎಸ್ ಶಾಲೆ ಎಸ್‌ಡಿಎಂಸಿ ವತಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗುವುದು. ಪೂರ್ವ ಪ್ರಾಥಮಿಕದಿಂದ 5 ನೇ ತರಗತಿವರೆಗೆ ಏಕ ತರಗತಿ ಪಠ್ಯಪುಸ್ತಕ ಆಧಾರಿತ ದ್ವಿಭಾಷಾ ಮಾಧ್ಯಮದ ಬೋಧನೆಯನ್ನು ಅಳವಡಿಸಿಕೊಳ್ಳಲಾಗುವುದು. 5 ರಿಂದ 10ನೇ ತರಗತಿವರೆಗೆ ಮಾಧ್ಯಮವಾರು ಏಕತರಗತಿ ಪಠ್ಯಪುಸ್ತಕ ಆಧಾರಿತ ತರಗತಿ ಮತ್ತು ಕ್ರಿಯಾಶೀಲ ಬೋಧನಾ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಎಂದರು.
ಜತೆಗೆ 1ನೇ ತರಗತಿಯಿಂದಲ್ಲೇ ಕಂಪ್ಯೂಟರ್ ಶಿಕ್ಷಣದ ಪರಿಚಯ, 6ನೇ ತರಗತಿಯಿಂದ ಉದ್ಯಮ ಸಮ್ಮಿಳಿತ ವೃತ್ತಿಪರ ಕೌಶಲ ಆಧಾರಿತ ಪಠ್ಯಕ್ರಮ ಪರಿಚಯ ಮತ್ತು 7ನೇ ತರಗತಿಯಿಂದ ಮಂಡಳಿ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರಿಕ್ಷೆಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿಸಿದೆ. ಶೀಘ್ರವೇ ಶಾಲೆಗಳಲ್ಲಿ ಎಸ್‌ಡಿಎಂಸಿ ಹಾಗೂ ಪಾಲಕರ ಸಭೆ ಕರೆದು ಮಾಹಿತಿ ಕಲೆ ಹಾಕಿ ಕಚೇರಿಗೆ ವರದಿ ಮಾಡಿ, ಇದು ತುರ್ತಾಗಿ ಆಗಬೇಕಿದೆ ಎಂದು ತಿಳಿಸಿದರು.
ಅರಬಗಟ್ಟೆ ಗ್ರಾಪಂ ಅಧ್ಯಕ್ಷ ಮಂಜಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಚಂದ್ರೇಗೌಡ, ಪ್ರೌಢಶಾಲೆ ಮುಖ್ಯಶಿಕ್ಷಕ ಮಂಜಪ್ಪ, ಎಸ್‌ಡಿಎಂಸಿ ಅಧ್ಯಕ್ಷರಾದ ಶಂಭು, ಬಸವರಾಜು, ಪ್ರಸನ್ನ, ಶಿಕ್ಷಣ