ಶಿಕ್ಷಣದ ಜತೆ ಇರಲಿ ಸೇವಾಭಾವ Education

ಬಸವಾಪಟ್ಟಣದ ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ವಿವಿಧ ಕಾರ್ಯಕ್ರಮಗಳ ಸವಾರೋಪ ಹಾಗೂ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸವಾರಂಭವನ್ನು ಗ್ರಾಪಂ ವಾಜಿ ಅಧ್ಯಕ್ಷ ಡಿ.ಆರ್. ಹಾಲೇಶ್ ಉದ್ಘಾಟಿಸಿದರು. ಪ್ರಾಚಾರ್ಯ ಟಿ. ಮಂಜಣ್ಣ, ಡಾ.ಪಿ.ಆರ್. ಪದ್ಮಪ್ಪ, ಡಾ.ಎಂ. ಆರ್.ಲೋಕೇಶ್, ಜಿ.ಪಿ. ಪ್ರಕಾಶ್ ಇತರರು ಇದ್ದರು. Education
ಬಸವಾಪಟ್ಟಣದ ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ವಿವಿಧ ಕಾರ್ಯಕ್ರಮಗಳ ಸವಾರೋಪ ಹಾಗೂ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸವಾರಂಭವನ್ನು ಗ್ರಾಪಂ ವಾಜಿ ಅಧ್ಯಕ್ಷ ಡಿ.ಆರ್. ಹಾಲೇಶ್ ಉದ್ಘಾಟಿಸಿದರು. ಪ್ರಾಚಾರ್ಯ ಟಿ. ಮಂಜಣ್ಣ, ಡಾ.ಪಿ.ಆರ್. ಪದ್ಮಪ್ಪ, ಡಾ.ಎಂ. ಆರ್.ಲೋಕೇಶ್, ಜಿ.ಪಿ. ಪ್ರಕಾಶ್ ಇತರರು ಇದ್ದರು. Education
Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಗ್ರಾಪಂ ಅಧ್ಯಕ್ಷ ಡಿ.ಆರ್. ಹಾಲೇಶ್ ಹೇಳಿಕೆ
ಬಸವಾಪಟ್ಟಣ: ವಿದ್ಯಾರ್ಥಿ ಜೀವನದಲ್ಲಿ ಪಠ್ಯಕ್ಕೆ ಸೀಮಿತರಾಗದೆ ಸಾಂಸ್ಕೃತಿಕ, ಕ್ರೀಡೆ ಮತ್ತು ಸೇವಾ ಚಟುವಟಿಕೆ ಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಾಜಿ ಗ್ರಾಪಂ ಅಧ್ಯಕ್ಷ ಡಿ.ಆರ್. ಹಾಲೇಶ್ ಹೇಳಿದರು. Education
ಗ್ರಾಮದ ಜನತಾ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಶುಕ್ರವಾರ ಆಯೋಜಿಸಿದ್ದ 2025-26ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ಯುವ ರೆಡ್‌ಕ್ರಾಸ್, ರೇಂಜರ್ಸ್ ಅಂಡ್ ರೋವರ್ಸ್ ಚಟುವಟಿಕೆಗಳ ಸವಾ ರೋಪ, ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸವಾರಂಭ ಊದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಚಟುವಟಿಕೆಗಳಲ್ಲಿ ವಿದ್ಯಾರ್ಥಿ ಗಳು ಸಕ್ರಿಯವಾಗಿ ಭಾಗವಹಿಸಿದರೆ ನಾಯಕತ್ವ ಗುಣ, ಶಿಸ್ತು ಹಾಗೂ ಸೇವಾ ಮನೋಭಾವ ಬೆಳೆಯುತ್ತದೆ. ಅಂತಿಮ ಪದವಿ ವಿದ್ಯಾರ್ಥಿಗಳ ಮುಂದಿನ ಜೀವನ ಉತ್ತಮವಾಗಿರಲಿ ಎಂದು ಹಾರೈಸಿದರು.
ಸಂಪನ್ಮೂಲ ವ್ಯಕ್ತಿ ಎಲ್. ಸಿದ್ದಪ್ಪ ಮತ್ತು ಪ್ರಾಚಾರ್ಯ ಪದ್ಮಪ್ಪ ವಾತನಾಡಿ, ವಿದ್ಯಾರ್ಥಿ ಗಳು ಶಿಕ್ಷಣದ ಜತೆಗೆ ಸಾವಾಜಿಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಎನ್‌ಎಸ್‌ಎಸ್, ಯುವ ರೆಡ್‌ಕ್ರಾಸ್ ಹಾಗೂ ರೇಂಜರ್ಸ್ ಅಂಡ್ ರೋವರ್ಸ್ ಚಟುವಟಿಕೆಗಳು ವಿದ್ಯಾರ್ಥಿ ಗಳಲ್ಲಿ ಸೇವಾ ಮನೋಭಾವ ಮತ್ತು ಜವಾಬ್ದಾರಿ ನಿಭಾಯಿಸುವ ಜ್ಞಾನ ಕಲಿಸುತ್ತವೆ. ಕಾಲೇಜಿನ ಅನುಭವಗಳು ಜೀವನಕ್ಕೆ ವಾರ್ಗದರ್ಶಿ ಆಗಲಿವೆ. ಗುರಿ ಸಾಧಿಸಲು ವಿದ್ಯಾರ್ಥಿಗಳು ನಿರಂತರ ಪರಿಶ್ರಮ ಪಡಬೇಕು ಎಂದರು.
ಪ್ರಾಚಾರ್ಯ ಟಿ.ಮಂಜಣ್ಣ ವಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ವಾನವೀಯ ಮೌಲ್ಯ ಅಳವಡಿಸಿಕೊಂಡು ಸವಾಜಮುಖಿ ಚಿಂತನೆಯೊಂದಿಗೆ ಮುಂದುವರಿಯಬೇಕು ಎಂದರು.
ಸಹಪ್ರಾಧ್ಯಾಪಕ ಎಂ.ಆರ್.ಲೋಕೇಶ್ ವಾತನಾಡಿ ಕಾಲೇಜಿನ ವಾರ್ಷಕ ವರದಿ ಓದಿದರು. ಆಡಳಿತ ಸಮಿತಿ ಸದಸ್ಯರು, ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net