ಮೊರಾರ್ಜಿ ವಸತಿ ಶಾಲೆ ಪರಿಶೀಲನೆ Visit

ದೇವರಬೆಳಕೆರೆ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಶುಕ್ರವಾರ ಶಾಸಕ ಬಿ.ಪಿ. ಹರೀಶ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು. Visit
ದೇವರಬೆಳಕೆರೆ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಶುಕ್ರವಾರ ಶಾಸಕ ಬಿ.ಪಿ. ಹರೀಶ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು. Visit
Published on

ಪ್ರಮುಖ ಮುಖ್ಯಾಂಶಗಳು

  • ಮಕ್ಕಳೊಂದಿಗೆ ಸಂವಾದ
  • ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡಿ
ಹರಿಹರ: ತಾಲೂಕಿನ ದೇವರಬೆಳಕೆರೆ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಬಿ.ಪಿ. ಹರೀಶ್ ಶುಕ್ರವಾರ ದಿಢೀರ್ ಭೇಟಿ ನೀಡಿ, ಶಾಲೆಯ ವ್ಯವಸ್ಥೆ ಹಾಗೂ ಮೂಲಸೌಕರ್ಯ ಪರಿಶೀಲಿಸಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. Visit
ವಸತಿ ಶಾಲೆಗೆ ಆಗಮಿಸಿದ ಶಾಸಕರು ಮೊದಲು ಆವರಣದಲ್ಲಿದ್ದ ವಿದ್ಯಾರ್ಥಿಗಳನ್ನು ಮಾತನಾಡಿಸಿ ಇಲ್ಲಿಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು. ನಂತರ ವಸತಿಯ ಕೊಠಡಿ ಹಾಗೂ ತರಗತಿಗಳಿಗೆ ಭೇಟಿ ನೀಡಿ ವೀಕ್ಷಿಸಿದರು.
ಶಾಲೆಯ ಅಡುಗೆ ಮನೆಗೆ ತೆರಳಿ ಸ್ವಚ್ಛತೆ ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಸಿದ್ಧಪಡಿಸ ಲಾಗಿದ್ದ ಬೆಳಗಿನ ಉಪಾಹಾರವನ್ನು ಸೇವಿಸಿ ಗುಣಮಟ್ಟ ಮತ್ತು ರುಚಿ ಪರೀಕ್ಷಿಸಿದರು. ಮಕ್ಕಳಿಗೆ ನಿಗದಿಪಡಿಸಿದ ಮೆನುವಿನಂತೆಯೇ ಪೌಷ್ಟಿಕ ಹಾಗೂ ಗುಣಮಟ್ಟದ ಆಹಾರವನ್ನು ನಿರಂತರವಾಗಿ ನೀಡಬೇಕು ಎಂದು ಅಡುಗೆ ಸಿಬ್ಬಂದಿ ಮತ್ತು ವಾರ್ಡನ್‌ಗೆ ಸೂಚನೆ ನೀಡಿದರು.
ವಿದ್ಯಾರ್ಥಿಗಳ ವಸತಿ ನಿಲಯ, ಶೌಚಗೃಹ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ನೋಡಿದರು. ವಸತಿ ಶಾಲೆಯಲ್ಲಿ ಯಾವುದೇ ರೀತಿಯ ಸೌಲಭ್ಯಗಳ ಕೊರತೆಯಾಗದಂತೆ ಹಾಗೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಅತ್ಯಂತ ಆಪ್ತವಾಗಿ ಸಂವಾದ ನಡೆಸಿದ ಶಾಸಕರು ಗ್ರಾಮೀಣ ಭಾಗದ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ವಸತಿ ಶಾಲೆಗಳನ್ನು ನಡೆಸುತ್ತಿದೆ. ಸಮಯದ ಸದುಪಯೋಗ ಮಾಡಿಕೊಂಡು, ಕಠಿಣ ಪರಿಶ್ರಮದಿಂದ ಓದಿ ಉನ್ನತ ಹುದ್ದೆ ಅಲಂಕರಿಸುವಂತೆ ಕಿವಿಮಾತು ಹೇಳಿದರು.
ಪ್ರಾಚಾರ್ಯ, ಶಿಕ್ಷಕ ವೃಂದ ಹಾಗೂ ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net