ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ

ದಾವಣಗೆರೆಯ ಪರೀಕ್ಷಾ ಕೇಂದ್ರವೊಂದರಲ್ಲಿ, ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಕಿವಿಯಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳಿವೆಯೆ ಎಂದು ತಪಾಸಣೆ ನಡೆಸಲಾಯಿತು.
ದಾವಣಗೆರೆಯ ಪರೀಕ್ಷಾ ಕೇಂದ್ರವೊಂದರಲ್ಲಿ, ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಕಿವಿಯಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳಿವೆಯೆ ಎಂದು ತಪಾಸಣೆ ನಡೆಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • 10,472 ಅಭ್ಯರ್ಥಿಗಳು ಹಾಜರು
  • ಬಿಗಿ ಕಣ್ಗಾವಲು, ಕಟ್ಟುನಿಟ್ಟಿನ ತಪಾಸಣೆ

ದಾವಣಗೆರೆ : ನಗರದ 19 ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲಿನಲ್ಲಿ ಭಾನುವಾರ ನಡೆದ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 11,031 ಅಭ್ಯರ್ಥಿಗಳಲ್ಲಿ 10,472 ಮಂದಿ ಹಾಜರಾಗಿದ್ದು, 559 ಜನ ಗೈರು ಹಾಜರಾಗಿದ್ದರು.

ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಗೃಹ, ಗಡಿಯಾರ ಹಾಗೂ ಸಿಸಿಟಿವಿ ಕಣ್ಗಾವಲು ವ್ಯವಸ್ಥೆ ಮಾಡಲಾಗಿತ್ತು. ಪ್ರತಿಯೊಂದು ಕೇಂದ್ರಕ್ಕೂ ಎಲೆಕ್ಟ್ರಾನಿಕ್ ಉಪಕರಣಗಳ ತಪಾಸಣೆಗೆ ಇ.ಎನ್.ಟಿ ತಜ್ಞರನ್ನು ನಿಯೋಜಿಸಲಾಗಿತ್ತು. ಕಿವಿಯಲ್ಲಿ ಉಪಕರಣಗಳನ್ನು ಅಳವಡಿಸಿಕೊಂಡಿದ್ದಾರೆಯೆ ಎಂಬುದನ್ನು ತಪಾಸಣೆ ಮಾಡಲಾಯಿತು. ಅಂಥ ಯಾವುದೇ ವಸ್ತುಗಳು ಕಂಡುಬಂದಿಲ್ಲ.
ಪರೀಕ್ಷಾ ಕೇಂದ್ರದ ಸುತ್ತಲಿನ ನಿರ್ಬಂಧಿತ ಪ್ರದೇಶದಲ್ಲಿ ಶಂಕಾಸ್ಪದ ವ್ಯಕ್ತಿಗಳು, ಕಾರುಗಳು ಅಥವಾ ಬೈಕ್‌ಗಳ ಚಲನವಲನದ ಮೇಲೆ ನಿಗಾ ವಹಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಜೆರಾಕ್ಸೃ್ ಅಂಗಡಿಗಳನ್ನು ಮುಚ್ಚಿಸಲಾಗಿತ್ತು.
ಹಾವೇರಿ ಮತ್ತು ದಾವಣಗೆರೆ ಜಿಲ್ಲೆಯ ಪರೀಕ್ಷೆಯ ಒ.ಎಂ.ಆರ್ ಶೀಟ್‌ಗಳ ಸ್ಕ್ಯಾನಿಂಗ್ ಕಾರ್ಯವು ಜಿಲ್ಲಾ ಕಚೇರಿಯಲ್ಲಿ ತಜ್ಞರ ಮೇಲ್ವಿಚಾರಣೆ ಹಾಗೂ ಬಿಗಿ ಭದ್ರತೆಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಎಸ್ಪಿ ಶೇಖರ್ ಎಚ್.ಟಿ. ಇನ್ನಿತರ ಅಧಿಕಾರಿಗಳು ಬೆಳಗ್ಗೆ 7 ಗಂಟೆಯಿಂದಲೇ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತೀವ್ರ ತಪಾಸಣೆಯ ನಂತರವೇ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಯೊಳಗೆ ಪ್ರವೇಶ ನೀಡಲಾಯಿತು. ಪರೀಕ್ಷೆಯು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಯಲು 4 ಜನ ಡಿವೈಎಸ್ಪಿ, 19 ಜನ ಇನ್‌ಸ್ಪೆಕ್ಟರ್, 38 ಪಿಎಸ್‌ಐ, 235 ಹೆಡ್ ಕಾನ್‌ಸ್ಟೇಬಲ್/ಕಾನ್‌ಸ್ಟೇಬಲ್‌ಗಳನ್ನು ನಿಯೋಜಿಸಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net