ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿಗೆ ಸೇತುಬಂಧ: ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಮೊದಲ ಒಂದು ತಿಂಗಳು ವಿದ್ಯಾರ್ಥಿಗಳಿಗೆ ಸೇತುಬಂಧ ಕಾರ್ಯಕ್ರಮ ನಡೆಯಲಿದೆ. ಇದರ ಭಾಗವಾಗಿ ಮಕ್ಕಳಿಗೆ ಪೂರ್ವ ಕಿರು ಪರೀಕ್ಷೆ ನಡೆಸಿ, ಅವರ ಕಲಿಕಾ ಸಾಮರ್ಥ್ಯಕ್ಕೆ ಅನುಗುಣವಾಗಿ ಎ, ಬಿ, ಸಿ, ಡಿ ಗ್ರೇಡ್‌ಗಳಾಗಿ ವಿಂಗಡಿಸಲಾಗುತ್ತದೆ. ನಂತರ ವಿಶೇಷ ಗಮನಹರಿಸಿ ಮತ್ತೊಂದು ಕಿರುಪರೀಕ್ಷೆಯ ಮೂಲಕ ಅವರ ಪ್ರಗತಿಯನ್ನು ತುಲನೆ ಮಾಡಲಾಗುತ್ತದೆ. ಅಂತಿಮ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸುವಂತೆ ಮಾಡಲು ಹಂತ-ಹಂತವಾಗಿ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ಯೋಜನೆಯನ್ನು ಸಕ್ರಿಯಗೊಳಿಸಲಾಗುತ್ತಿದೆ.