ವಾಂಗ್ಚುಕ್ ಬಂಧನ ಖಂಡಿಸಿ ಪ್ರತಿಭಟನೆ

ಪರಿಸರವಾದಿ ಸೋನಮ್ ವಾಂಗ್ಚುಕ್ ಅವರ ಬಲವಂತದ ಬಂಧನವನ್ನು ಖಂಡಿಸಿ ಜಗಳೂರಿನಲ್ಲಿ ಗುರುವಾರ ಎಸ್‌ಎಫ್‌ಐ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಅನಂತ್ ರಾಜ್, ಮಲೆಮಾಚಿಕೆರೆ ಸತೀಶ್, ಧನ್ಯಕುಮಾರ್ ಇತರರಿದ್ದರು.Wangchuk
ಪರಿಸರವಾದಿ ಸೋನಮ್ ವಾಂಗ್ಚುಕ್ ಅವರ ಬಲವಂತದ ಬಂಧನವನ್ನು ಖಂಡಿಸಿ ಜಗಳೂರಿನಲ್ಲಿ ಗುರುವಾರ ಎಸ್‌ಎಫ್‌ಐ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಅನಂತ್ ರಾಜ್, ಮಲೆಮಾಚಿಕೆರೆ ಸತೀಶ್, ಧನ್ಯಕುಮಾರ್ ಇತರರಿದ್ದರು.Wangchuk
Published on
ಜಗಳೂರು: ಪರಿಸರವಾದಿ ಹಾಗೂ ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಬಂಧನ ಖಂಡಿಸಿ, ಗುರುವಾರ ಎಸ್‌ಎಫ್‌ಐ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.
ಪಟ್ಟಣದ ಪ್ರವಾಸಿ ಮಂದಿರದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಮಹಾತ್ಮ ಗಾಂಧಿ ಹಳೇ ವೃತ್ತ, ಹೊಸ ಬಸ್ ನಿಲ್ದಾಣ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಮಾರ್ಗವಾಗಿ ತಾಲೂಕು ಕಚೇರಿಗೆ ತಲುಪಿತು. ಬಳಿಕ ಗ್ರೇಡ್-2 ತಹಸೀಲ್ದಾರ್ ಪಾಲಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಅನಂತ್‌ರಾಜ್ ಮಾತನಾಡಿ, ನಿರಶನ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಅವರನ್ನು ಜು.21ರಂದು ದೆಹಲಿ ಪೊಲೀಸರು ಜಂತರ್ ಮಂತರ್‌ಗೆ ನುಗ್ಗಿ ಅವರನ್ನು ಬಲವಂತವಾಗಿ ಬಂಧಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಟೀಕಿಸಿದರು.
ವಕೀಲ ಆರ್. ಓಬಳೇಶ್ ಮಾತನಾಡಿ, ಕೇಂದ್ರ ಸರ್ಕಾರವು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರು ಹಾಗೂ ಅಕ್ರಮ ಎಸಗಿದವರ ಬೆಂಬಲಕ್ಕೆ ನಿಂತಿದೆ ಎಂದು ಆರೋಪಿಸಿದರು.
ಪ್ರಗತಿಪರ ಹೋರಾಟಗಾರ ಧನ್ಯಕುಮಾರ್ ಮಾತನಾಡಿ, ಪ್ರಶ್ನೆ ಪತ್ರಿಕೆ ಸೋರಿಕೆಯ ಅಕ್ರಮಕ್ಕೆ ಬಲಿಯಾಗಿ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಅಕ್ರಮವನ್ನು ಪ್ರಶ್ನಿಸುವ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಯತ್ನಿಸುತ್ತಿದ್ದು, ಎನ್‌ಟಿಎ ಸಂಸ್ಥೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದರು.
ಪ್ರಗತಿಪರ ಹೋರಾಟಗಾರ ವ್ಯಾಸಗೊಂಡನಹಳ್ಳಿ ರಾಜಪ್ಪ, ರೈತ ಸಂಘಟನೆಯ ತಾಲೂಕಾಧ್ಯಕ್ಷ ಭರಮಸಮುದ್ರ ಕುಮಾರ್, ಪ್ರಗತಿಪರ ಹೋರಾಟಗಾರ ಗೌರಿಪುರ ಸತ್ಯಮೂರ್ತಿ, ಮಹಿಳಾ ಹೋರಾಟಗಾರ್ತಿ ಎಸ್.ಆರ್. ಇಂದಿರಾ ಇತರರಿದ್ದರು.

ರಾಜೀನಾಮೆಗೆ ಆಗ್ರಹ

ಕೇಂದ್ರ ಸರ್ಕಾರವು ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ 22 ಜನರ ಸಾವಿಗೆ ಕಾರಣರಾದವರನ್ನು ರಕ್ಷಿಸುತ್ತಿದೆ. ಹೋರಾಟಗಾರರನ್ನು ದೇಶದ್ರೋಹಿಗಳೆಂದು ಬಿಂಬಿಸುತ್ತಿದೆ. ಇದಕ್ಕೆ ನೈತಿಕ ಹೊಣೆ ಹೊತ್ತು ಗೃಹ ಸಚಿವ ಅಮಿತ್ ಶಾ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕು ಎಂದು ಪ್ರಗತಿಪರ ಹೋರಾಟಗಾರ ಮಲೆಮಾಚಿಕೆರೆ ಸತೀಶ್ ಆಗ್ರಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net