ಹೊನ್ನಾಳಿ-ನ್ಯಾಮತಿ ತಾಲೂಕಿನಲ್ಲಿ ನಮ್ಮ ಪಕ್ಷದ ಬಿಎಲ್‌ಎಗಳು ಸಹ ಬಿಎಲ್‌ಒಗಳ ಜತೆಗೂಡಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಪ್ರಕ್ರಿಯೆ ಬಗ್ಗೆ ಅನೇಕರು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಅನರ್ಹ ಮತದಾರರನ್ನು ಪಟ್ಟಿಯಿಂದ ಹೊರಹಾಕಲು ಈ ಪರಿಷ್ಕರಣೆ ನಡೆಯುತ್ತಿದೆಯೇ ಹೊರತು, ನಿಜವಾದ ಭಾರತೀಯ ಮತದಾರರ ಹೆಸರನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ತಾಲೂಕಾಧ್ಯಕ್ಷ ಅರಕೆರೆ ನಾಗರಾಜ್, ಬಿಜೆಪಿ ಮುಖಂಡ ರಂಗನಾಥ್ ಹಾಗೂ ಗ್ರಾಮಸ್ಥರು ಇದ್ದರು.