ವಿಶೇಷ ಲೋಕ ಅದಾಲತ್‌ನಲ್ಲಿ ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ವಸೂಲಾತಿ, ಭೂಸ್ವಾಧೀನ ದಾವೆಗಳು, ಜೀವನಾಂಶ, ವಿಚ್ಛೇದನ ಸೇರಿ ವೈವಾಹಿಕ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನ ಕ್ಲೇಮುಗಳು, ವಿದ್ಯುತ್ ಮತ್ತು ನೀರಿನ ಶುಲ್ಕದ ಬಾಕಿ ಹಾಗೂ ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ವಿಶೇಷವಾಗಿ ಅಪಘಾತದ ಪ್ರಕರಣಗಳಲ್ಲಿ ಇಲ್ಲಿ ಶೀಘ್ರ ಪರಿಹಾರ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು.