ಹೊನ್ನಾಳಿ: ಮಳೆ ನಿಂತರೂ ಮಳೆ ಹನಿ ನಿಂತಿಲ್ಲ ಎನ್ನುವಂತೆ, ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮಗಳು ಇದೀಗ ಗ್ರಾಮೀಣ ಭಾಗದ ಹೋಟೆಲ್ ಉದ್ಯಮದ ಮೇಲೆ ತೀವ್ರವಾಗಿ ತಟ್ಟುತ್ತಿವೆ. ಯುದ್ಧದ ಹಿನ್ನೆಲೆಯಲ್ಲಿ ಉಂಟಾಗಿದ್ದ ಗ್ಯಾಸ್ ಟ್ರಬಲ್ ಮನೆಬಳಕೆಯ ಮಟ್ಟಿಗೆ ಸುಧಾರಿಸಿದ್ದರೂ, ವಾಣಿಜ್ಯ ಸಿಲಿಂಡರ್‌ಗಳ ಕೊರತೆ ಮತ್ತು ಬೆಲೆ ಏರಿಕೆಯಿಂದಾಗಿ ಹೋಟೆಲ್ ಮಾಲೀಕರು ಅನಿವಾರ್ಯವಾಗಿ ಮತ್ತೆ ಕಟ್ಟಿಗೆ ಒಲೆಗಳ ಮೊರೆ ಹೋಗುತ್ತಿದ್ದಾರೆ.