ಸಾಂಕ್ರಾಮಿಕ ರೋಗ ತಡೆಗೆ ಕ್ರಮ ವಹಿಸಿ

ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ, ವಿವಿಧ ಇಲಾಖೆಗಳೊಂದಿಗೆ ಆಯೋಜಿಸಿದ್ದ ಅಂತರಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಡೆಂಘಿ ದಿನಾಚರಣೆಯ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಎಸ್ಪಿ ಎಚ್.ಟಿ. ಶೇಖರ್, ಎಡಿಸಿ ಶೀಲವಂತ ಶಿವಕುಮಾರ್, ಡಾ.ಷಣ್ಮುಖಪ್ಪ ಇತರರಿದ್ದರು.
ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ, ವಿವಿಧ ಇಲಾಖೆಗಳೊಂದಿಗೆ ಆಯೋಜಿಸಿದ್ದ ಅಂತರಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಡೆಂಘಿ ದಿನಾಚರಣೆಯ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಎಸ್ಪಿ ಎಚ್.ಟಿ. ಶೇಖರ್, ಎಡಿಸಿ ಶೀಲವಂತ ಶಿವಕುಮಾರ್, ಡಾ.ಷಣ್ಮುಖಪ್ಪ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸೊಳ್ಳೆಗಳ ಲಾರ್ವಾ ನಿಯಂತ್ರಣ ಮಾಡಿ
  • ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ
  • ಅಂತರಇಲಾಖಾ ಸಮನ್ವಯ ಸಮಿತಿ ಸಭೆ
ದಾವಣಗೆರೆ: ಮಳೆಗಾಲ ಪ್ರಾರಂಭವಾಗಿದ್ದು, ಮಲೇರಿಯಾ ಹರಡುವ ಕಾಲ ಇದಾಗಿದೆ. ಸಾಂಕ್ರಾಮಿಕ ರೋಗ ತಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ, ವಿವಿಧ ಇಲಾಖೆಗಳೊಂದಿಗೆ ಆಯೋಜಿಸಿದ್ದ ಪಲ್ಸ್ ಪೋಲಿಯೋ, ಅಂತರಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಲಕಾಲಕ್ಕೆ ಚರಂಡಿಗಳನ್ನು ಶುಚಿಗೊಳಿಸಬೇಕು. ಎಲ್ಲಿಯೂ ನೀರು ಸಂಗ್ರಹವಾಗದಂತೆ ನೋಡಿಕೊಂಡು ಮಲೇರಿಯಾ ಹರಡದಂತೆ ಎಚ್ಚರ ವಹಿಸಬೇಕು. ಸೊಳ್ಳೆಗಳ ಲಾರ್ವ ತಡೆಗೆ ಕ್ರಮವಹಿಸಿ ಎಂದು ಹೇಳಿದರು.
ಜಿಲ್ಲೆಯ ಶಾಲಾ, ಕಾಲೇಜು, ಅಂಗನವಾಡಿ, ಆಸ್ಪತ್ರೆ ಇನ್ನಿತರೆ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಂತಿರುವ ನೀರನ್ನು ತೆರವುಗೊಳಿಸಿ ಸ್ವಚ್ಚಗೊಳಿಸಿದ ವರದಿ ನೀಡಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಸೊಳ್ಳೆ ಪರದೆಯನ್ನು ಅಳವಡಿಸಬೇಕು. ಬಳಸುವ ನೀರಿಗೆ ಬೇವಿನ ಎಣ್ಣೆಯನ್ನು ಬೆರೆಸಬೇಕು.
ಶಾಲಾ ಮಕ್ಕಳಿಗೆ ಒಡಮಸ್ ಹಚ್ಚಿಕೊಂಡು ಬರುವಂತೆ ತಿಳಿಸಬೇಕು. ಗ್ಯಾರೇಜ್ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆ ಮಾಡಬೇಕು. ವೈದ್ಯರು ನಿಯೋಜಿತ ಕರ್ತವ್ಯವನ್ನು ಸಾಮಾಜಿಕ ಕಳಕಳಿಯಿಂದ ನಿರ್ವಹಿಸಬೇಕು ಎಂದು ಹೇಳಿದರು.
ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆಪರದೆ, ಕಿಟಕಿಗಳಿಗೆ ಜಾಲರಿ ಹಾಕಿದರೆ ಮನೆಯೊಳಗೆ ಸೊಳ್ಳೆ ಬರುವುದನ್ನು ತಡೆಗಟ್ಟಬಹುದು. ಚರಂಡಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಸೊಳ್ಳೆರಹಿತ ಓವರ್‌ಹೆಡ್ ಟ್ಯಾಂಕ್ ಹಾಗೂ ಅಂಡರ್‌ಗ್ರೌಂಡ್ ಟ್ಯಾಂಕ್‌ಗಳನ್ನು ನಿರ್ಮಿಸುವಂತೆ ಅಗತ್ಯ ನಿಯಮಾವಳಿ ಜಾರಿಗೊಳಿಸಿ, ಕಟ್ಟುನಿಟ್ಟಾಗಿ ಪಾಲಿಸಲು ಎಚ್ಚರಿಸಬೇಕು ಎಂದರು.
ವಾರಕೊಮ್ಮೆ ಸೊಳ್ಳೆನಾಶಕ ದ್ರಾವಣವನ್ನು ಸೊಳ್ಳೆ ಉತ್ಪತ್ತಿ ತಾಣಗಳಲ್ಲಿ ಸಿಂಪಡಿಸಬೇಕು. ನಗರ ಪ್ರದೇಶಗಳಲ್ಲಿ ಅನಾಫಿಲಿಸ್ ಸೊಳ್ಳೆಯು ಸಿಮೆಂಟ್ ತೊಟ್ಟಿ, ಸಿಂಟೆಕ್ಸ್, ಡ್ರಂಗಳಲ್ಲಿ ಉತ್ಪತ್ತಿಯಾಗಲಿದೆ. ಹೀಗಾಗಿ ಅವನ್ನು ನಿರಂತರವಾಗಿ ಮುಚ್ಚಿಡುವಂತೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ರೇಣುಕಾರಾಧ್ಯ ಮಾತನಾಡಿ ಜಿಲ್ಲೆಯಲ್ಲಿ ಜೂ.28 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಲಸಿಕಾ ದಿನ ಅಂಗನವಾಡಿ ಕೇಂದ್ರವನ್ನು ತೆರೆದಿಡಲು ಸೂಚಿಸಬೇಕು. ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಬೇಕು. ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
ನವಜಾತ ಶಿಶುಗಳನ್ನು ಗುರುತಿಸಿ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡಬೇಕು. ತಾಯಂದಿರ ಸಭೆಗಳಲ್ಲಿ ಲಸಿಕಾ ದಿನಾಂಕದ ಕುರಿತು, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಮಹತ್ವದ ಕುರಿತು ತಿಳಿಸಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಡಿಎಚ್‌ಒ ಡಾ.ಷಣ್ಮುಖಪ್ಪ, ಚಿಗಟೇರಿ ಆಸ್ಪತ್ರೆ ಅಧೀಕ್ಷಕ ಡಾ.ನಾಗೇಂದ್ರಪ್ಪ, ಪಾಲಿಕೆ ಆಯುಕ್ತ ಮಹಾಂತೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net