ವಿಬಿ-ಜಿ ರಾಮ್‌ಜಿ ಯೋಜನೆ ವಿರೋಧ ಸಲ್ಲ

ಚನ್ನಗಿರಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರದ ವಿರುದ್ಧ ಜಾಗೃತಿ ಅಭಿಯಾನಕ್ಕೆ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚಾಲನೆ ನೀಡಿದರು. ಡಿ.ಸಿ. ಕುಮಾರ್, ಕುಬೇಂದ್ರೋಜಿರಾವ್, ಲಕ್ಷ್ಮೀದೇವಮ್ಮ, ಸಂತೇಬೆನ್ನೂರು ಬಸವರಾಜ್, ಶಶಿಕಲಾ ನಾಗರಾಜ್ ಇದ್ದರು.Campaign
ಚನ್ನಗಿರಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರದ ವಿರುದ್ಧ ಜಾಗೃತಿ ಅಭಿಯಾನಕ್ಕೆ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚಾಲನೆ ನೀಡಿದರು. ಡಿ.ಸಿ. ಕುಮಾರ್, ಕುಬೇಂದ್ರೋಜಿರಾವ್, ಲಕ್ಷ್ಮೀದೇವಮ್ಮ, ಸಂತೇಬೆನ್ನೂರು ಬಸವರಾಜ್, ಶಶಿಕಲಾ ನಾಗರಾಜ್ ಇದ್ದರು.Campaign
Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅಭಿಪ್ರಾಯ
  • ಜಾಗೃತ ಅಭಿಯಾನಕ್ಕೆ ಚಾಲನೆ
ಚನ್ನಗಿರಿ: ಗ್ರಾಮೀಣ ಭಾಗದ ಬಡವರ ಮತ್ತು ಕೂಲಿ ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ಜಿ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ಕಾರಣಕ್ಕಾಗಿ ವಿರೋಧಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ತಿಳಿಸಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರದ ವಿರುದ್ಧ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ವರ್ಷದ ಎಲ್ಲ ದಿನಗಳಲ್ಲೂ ಕೆಲಸ ಸಿಗುವಂತೆ ಮಾಡಿ, ಅವರು ಸ್ವಾಲಂಬಿಯಾಗಿ ಬದುಕಲು ಈ ಯೋಜನೆ ಸಹಕಾರಿಯಾಗಿದೆ. ಕೂಲಿ ಹಣ ನೇರವಾಗಿ ಕಾರ್ಮಿಕರ ಖಾತೆಗೆ ಜಮೆಯಾಗಲಿದೆ. ಕೇಂದ್ರ ಸರ್ಕಾರ ಶೇ.60ರಷ್ಟು ಅನುದಾನ ನೀಡಲಿದ್ದು, ರಾಜ್ಯ ಸರ್ಕಾರ ಶೇ. 40ರಷ್ಟು ಪಾಲನ್ನು ಭರಿಸಬೇಕಿದೆ. ಕೆಲಸ ನೀಡಲು ಸಾಧ್ಯವಾಗದ ದಿನಗಳಲ್ಲಿ ಕಾರ್ಮಿಕರಿಗೆ ಸ್ಟೈಪೆಂಡ್(ಭತ್ಯೆ) ನೀಡುವ ಅವಕಾಶವನ್ನೂ ಈ ಯೋಜನೆ ಒಳಗೊಂಡಿದೆ ಎಂದರು.
ರಾಜ್ಯದ ಮೇಲೆ ಹಣದ ಹೊರೆ ಬೀಳುತ್ತದೆ ಎನ್ನುವ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಬಡವರ ಪರವಾದ ಈ ಯೋಜನೆಯನ್ನು ವಿರೋಧಿಸುತ್ತಿದೆ. ಮಹಾತ್ಮ ಗಾಂಧೀಜಿಯವರ ಹೆಸರನ್ನು ಬಳಸಿಕೊಂಡು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಜನರ ಮನಸ್ಸು ಬದಲಿಸಲು ಸರ್ಕಾರದ ಹಣ ಬಳಸಿ ಪತ್ರಿಕೆಗಳಲ್ಲಿ ಜಾಹೀರಾತು ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಮಾಡಾಳು ಮಲ್ಲಿಕಾರ್ಜುನ ಮಾತನಾಡಿ, ಹಳೆಯ ಯೋಜನೆಯಲ್ಲಿ ಅನುದಾನವು ಮಧ್ಯವರ್ತಿಗಳ ಪಾಲಾಗುತ್ತಿತ್ತು. ಅದನ್ನು ತಪ್ಪಿಸಲು ಕೇಂದ್ರ ಹೊಸ ಯೋಜನೆ ತಂದಿದೆ. ಮುಂದಿನ ಒಂದು ತಿಂಗಳ ಕಾಲ ತಾಲೂಕಿನ ಪ್ರತಿ ಗ್ರಾಮ ಮತ್ತು ಬೂತ್ ಮಟ್ಟದಲ್ಲಿ ಈ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.
ಬಿಜೆಪಿ ತಾಲೂಕಾಧ್ಯಕ್ಷ ಡಿ.ಸಿ. ಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ಕುಬೇಂದ್ರೋಜಿರಾವ್, ಲಕ್ಷ್ಮೀದೇವಮ್ಮ, ಸಂತೇಬೆನ್ನೂರು ಬಸವರಾಜ್, ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ನಾಗರಾಜ್, ರೂಪಾ ಶೇಠ್, ಶಿವಣ್ಣ ನಲ್ಲೂರು, ಬಸವರಾಜ್ ದೇವರಹಳ್ಳಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net