ನೇತಾಜಿ ಆದರ್ಶ ಪಾಲಿಸಲು ವಿದ್ಯಾರ್ಥಿಗಳಿಗೆ ಸಲಹೆ

dvg-aidso-07-1.jpg
Published on

ದಾವಣಗೆರೆ : ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ವಿಚಾರ ಮತ್ತು ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಹೋರಾಟಗಾರ ಡಾ. ಸುನೀತ್ ಕುಮಾರ್ ಕರೆ ನೀಡಿದರು.
ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವರ್ಷಾಚರಣೆಯ ಅಂಗವಾಗಿ ನಗರದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ನೇತಾಜಿ ಅವರು ದೇಶಕ್ಕೆ ನೀಡಿದ ಕೊಡುಗೆ, ಅವರ ರಾಷ್ಟ್ರಭಕ್ತಿ ಮುಂತಾದ ವಿಷಯಗಳ ಕುರಿತು ಸ್ಫೂರ್ತಿದಾಯಕವಾಗಿ ಮಾತನಾಡಿದರು.
ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಪೂಜಾ ನಂದಿಹಳ್ಳಿ, ಜಿಲ್ಲಾ ಕಚೇರಿ ಕಾರ್ಯದರ್ಶಿ ಬಿ. ಕಾವ್ಯ, ಸಂಘಟನಾಕಾರ್ತಿ ರುಚಿತಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net