ಸಾಂತ್ವನ ಹೇಳಿದ ಜಿಲ್ಲಾಧಿಕಾರಿ ವೆಂಕಟೇಶ್

adake.jpg
Published on

ದಾವಣಗೆರೆ:  ತಾಲೂಕಿನ ಮುದಹದಡಿ ಗ್ರಾಮದಲ್ಲಿ ದುಷ್ಕರ್ಮಿಗಳು ಅಡಕೆ ಗಿಡಗಳನ್ನು ಕಡಿದು ಹಾಕಿದ ಸ್ಥಳಕ್ಕೆ ಭಾನುವಾರ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತ ರೈತನಿಗೆ ಸಾಂತ್ವನ ಹೇಳಿದರು.
 ಅಡಕೆ ಗಿಡಗಳನ್ನು ಕಡಿಯಲು ಕಾರಣವೇನು ಮತ್ತು ಇದರಿಂದ ಎಷ್ಟು ನಷ್ಟವಾಗಿದೆ ಎಂದು ವರದಿ ನೀಡಲು ಸ್ಥಳದಲ್ಲಿದ್ದ ತಹಸೀಲ್ದಾರ್ ಅಶ್ವಥ್ ಅವರಿಗೆ ಸೂಚನೆ ನೀಡಿದರಲ್ಲದೆ ವರದಿ ಬಂದ ನಂತರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net