ಲೈಂಗಿಕ ದೌರ್ಜನ್ಯ ಪ್ರಕರಣದ ಸಿಬಿಐ ತನಿಖೆಗೆ ಆಗ್ರಹ

IMG_20220902_114144.jpg
Published on

ದಾವಣಗೆರೆ : ಶಿವಮೂರ್ತಿ ಮುರುಘಾ ಶರಣರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ನಂತರ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಪ್ರತಿಭಟನೆಯ ವೇಳೆ ವಕೀಲ ಗುಮ್ಮನೂರು ಮಲ್ಲಿಕಾರ್ಜುನ ಮಾತನಾಡಿ, ಈ ಪ್ರಕರಣದ ತನಿಖೆಯಲ್ಲಿ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರ ವಿಫಲವಾಗಿವೆ ಎಂದು ಆರೋಪಿಸಿದರು.
ಪ್ರಕರಣದ ಇನ್ನುಳಿದ ಆರೋಪಿಗಳನ್ನೂ ಬಂಧಿಸಬೇಕು, ಸಂತ್ರಸ್ತ ಮಕ್ಕಳಿಗೆ 1 ಕೋಟಿ ರೂ. ಪರಿಹಾರ ನೀಡಬೇಕು, ಪಾರದರ್ಶಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ನಿವೃತ್ತ ಪ್ರಾಧ್ಯಾಪಕ ಎ.ಬಿ. ರಾಮಚಂದ್ರಪ್ಪ ಮಾತನಾಡಿ, ಪ್ರತಿಯೊಬ್ಬರೂ ಈ ನೆಲದ ಕಾನೂನನ್ನು ಗೌರವಿಸಬೇಕು. ಈ ಪ್ರಕರಣದಲ್ಲಿ ಬಹುಜನರು ಸ್ವಾಮೀಜಿ ಪರವಾಗಿ ಮಾತನಾಡುತ್ತಿದ್ದು, ಸಂತ್ರಸ್ತ ಬಾಲಕಿಯರ ಬಗ್ಗೆ ಹೇಳುತ್ತಿಲ್ಲ. ಪ್ರಕರಣದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಬಲ್ಲೂರು ರವಿಕುಮಾರ್, ಹೆಗ್ಗೆರೆ ರಂಗಪ್ಪ, ಐರಣಿ ಚಂದ್ರು, ಮಲ್ಲೇಶ್, ಶ್ರೀನಿವಾಸ್, ಜಬೀನಾ ಖಾನಂ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net