ದಾವಣಗೆರೆಯನ್ನು ಬರ ಪೀಡಿತ ಜಿಲ್ಲೆ ಘೋಷಿಸಲು ಆಗ್ರಹ

ravikumar ballur
Published on

ದಾವಣಗೆರೆ: ಸಕಾಲದಲ್ಲಿ ಮಳೆ ಬಾರದೆ ಬಿತ್ತನೆಗೆ ಹಿನ್ನಡೆ ಆಗಿರುವುದರಿಂದ ಜಿಲ್ಲೆಯನ್ನು ಬರ ಪೀಡಿತ ಎಂದು ಘೋಷಿಸಲು ರಾಜ್ಯ ರೈತ ಸಂಘದ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮುಂಗಾರು ವೈಫಲತೆಯಿಂದಾಗಿ ಶೇ.30ರಷ್ಟು ಮಾತ್ರ ಬಿತ್ತನೆ ಕಾರ್ಯ ನಡೆದಿದೆ. ರೈತರು ಸಕಾಲಕ್ಕೆ ಬಿತ್ತನೆ ಮಾಡಿಲ್ಲ ಹಾಗೂ ಭದ್ರಾ ಜಲಾಶಯಕ್ಕೆ ನೀರು ಬಾರದಿರುವುದರಿಂದ ಭತ್ತದ ನಾಟಿ ಕಾರ್ಯವೂ ನಡೆದಿಲ್ಲ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಬೆಳೆ ಅಸಮರ್ಪಕತೆ ಉಂಟಾಗುವ ಮುನ್ಸೂಚನೆ ಪ್ರಯುಕ್ತ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಿ ಜನ, ಜಾನುವಾರುಗಳಿಗೆ ನೀರು ಹಾಗೂ ಆಹಾರ ಒದಗಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ರೈತ ಸಂಘದ ಕಾರ್ಯದರ್ಶಿ ಬಲ್ಲೂರು ರವಿಕುಮಾರ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣಬೇರು ಕುಮಾರಸ್ವಾಮಿ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net