ರಾಜ್ಯ ಸಹಕಾರಿ ಸಮಾವೇಶ 22ಕ್ಕೆ

1000510373.jpg
Published on

ದಾವಣಗೆರೆ: ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ನ.22 ರಂದು ಸಹಕಾರ ಭಾರತಿ ಕರ್ನಾಟಕ ವತಿಯಿಂದ ರಾಜ್ಯ ಸಹಕಾರಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಮ್ಮೇಳನ ಸಮಿತಿ ಕಾರ್ಯಾಧ್ಯಕ್ಷ ಎಂ.ಆರ್.ಪ್ರಭುದೇವ್ ಹೇಳಿದರು.
ಅಂದು ಬೆಳಗ್ಗೆ 11 ಕ್ಕೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಪುಷ್ಪಗಿರಿ ಮಹಾಸಂಸ್ಥಾನ ಮಠದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಸಂಸದ ಗೋವಿಂದ ಕಾರಜೋಳ ಉದ್ಘಾಟಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಹಕಾರ ಭಾರತಿ ರಾಷ್ಟ್ರೀಯ ಅಧ್ಯಕ್ಷ ದೀನಾನಾಥ್ ಠಾಕೂರ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ, ರಾಷ್ಟ್ರೀಯ ಕಾರ್ಯದರ್ಶಿ ಉದಯ್ ವಾಸುದೇವ್ ಜೋಶಿ, ಸಮ್ಮೇಳನ ಸಮಿತಿ ಗೌರವಾಧ್ಯಕ್ಷ ಜಿ. ನಂಜನಗೌಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಹಕಾರ ಭಾರತಿ ರಾಜ್ಯಾಧ್ಯಕ್ಷ ರಾಜಶೇಖರ್ ಶೀಲವಂತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಸಹಕಾರಿ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಯುವಕರ ಪಾತ್ರ, ಪಂಚ ಪರಿವರ್ತನೆ, ಸಹಕಾರಿ ಸಂಘಗಳಲ್ಲಿ ಆಡಳಿತ ಮಂಡಳಿ ಜವಾಬ್ದಾರಿ ಸೇರಿ ವಿವಿಧ ವಿಚಾರಗೋಷ್ಠಿಗಳು ನಡೆಯಲಿವೆ ಎಂದು ಹೇಳಿದರು.
ಸಂಜೆ 4 ಗಂಟೆಗೆ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂಜಯ್ ಪಾಚಪೂರ ಮುಖ್ಯ ಭಾಷಣ ಮಾಡಲಿದ್ದಾರೆ. ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಸಮಾವೇಶಕ್ಕೆ ರಾಜ್ಯದ ವಿವಿಧ ಭಾಗಗಳಿಂದ 1500ಕ್ಕೂ ಹೆಚ್ಚು ಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದರು.
ಪದಾಧಿಕಾರಿಗಳಾದ ಜಿ.ಎನ್.ಸ್ವಾಮಿ, ಮುರುಗೇಶ್ ಆರಾಧ್ಯ, ಎಸ್.ಟಿ. ವೀರೇಶ್, ಪರಶುರಾಮ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
---

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net