ಕೈಗೆ ದಲಿತ ಸಂಘಟನೆಗಳ ಒಕ್ಕೂಟ ಬೆಂಬಲ

1000101912_20240501150352368.jpg
Published on

ದಾವಣಗೆರೆ: ಸಂವಿಧಾನ ಬದಲಾಯಿಸುವ ಬಿಜೆಪಿಯ ಕೆಲ ಮುಖಂಡರ ಹೇಳಿಕೆ ಹಿನ್ನೆಲೆಯಲ್ಲಿ ಭಾಜಪ ಸೋಲಿಸಿ ಇಂಡಿಯಾ ಒಕ್ಕೂಟ ಗೆಲ್ಲಿಸುವಂತೆ ಡಾ. ಬಿ.ಆರ್. ಅಂಬೇಡ್ಕರ್ ದಲಿತ ಸಂಘಟನೆಗಳ ಒಕ್ಕೂಟ ಮನವಿ ಮಾಡಿದ್ದು, ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದೆ ಎಂದು ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ಎಂ.ಗುರುಮೂರ್ತಿ ಹೇಳಿದರು.
ಕಳೆದ 10 ವರ್ಷಗಳಲ್ಲಿ ಸಂವಿಧಾನದ ಆಶಯ, ಮೌಲ್ಯಗಳು ಕುಸಿದಿದ್ದು, ಕೋಮುವಾದ ವಿಜೃಂಭಿಸುತ್ತಿದೆ. ಸಾಮಾಜಿಕ ನ್ಯಾಯ ಕನಸಿನ ಗಂಟು ಆಗಿದೆ. ಎನ್‌ಡಿಎ ಅಭ್ಯರ್ಥಿಗಳನ್ನು ಸೋಲಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
 ಕಾಂಗ್ರೆಸ್‌ನ ಗ್ಯಾರಂಟಿಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ ಯೋಜನೆಗಳು ಬರಗಾಲದಲ್ಲಿ ಜನರ ಕೈಹಿಡಿದಿವೆ. ಕೋಮುವಾದಿ ಪಕ್ಷಗಳು ಅಧಿಕಾರಕ್ಕೆ ಬರುವುದನ್ನು ತಡೆಯಲು 14 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಮುಖಂಡ ಎಂ. ಗೋವಿಂದರಾಜು ಮಾತನಾಡಿ ಸಂವಿಧಾನ, ಮೀಸಲಾತಿ ವಿರೋಧಿ ಮಾತುಗಳನ್ನು ಆಡಿದವರಿಗೆ ಮೋದಿ ಕರೆದು ಬುದ್ಧಿ ಹೇಳಲಿಲ್ಲ. ಪ್ರಜಾಪ್ರಭುತ್ವ ಅಪಾಯದಂಚಿನಲ್ಲಿ ಇದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸಬೇಕು. ಈ ನಿಟ್ಟಿನಲ್ಲಿ ಜನಾಂದೋಲನ, ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಮುಖಂಡರಾದ ಡಿ.ಎಸ್. ರಾಜಗೋಪಾಲ್, ಎ.ಗೋಪಾಲ್, ಕುಂದವಾಡದ ಮಂಜುನಾಥ್, ಬಿ.ಎ.ಕಾಟ್ಕೆ, ವಿಜಯಮ್ಮ, ಚಿತ್ರಲಿಂಗಪ್ಪ, ಪ್ರದೀಪ್, ಪಿ.ಜೆ. ಮಹಾಂತೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net