ಇಂದು ದಸರಾ ಶೋಭಾಯಾತ್ರೆ  ಜಾನಪದ ತಂಡಗಳ ಮೆರುಗು

1000429215.jpg
Published on

ದಾವಣಗೆರೆ: ಸಾರ್ವಜನಿಕ ವಿಜಯದಶಮಿ ಮಹೋತ್ಸವ ಪ್ರಯುಕ್ತ ಅ.12ರಂದು ನಗರದಲ್ಲಿ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ಬಿ. ಶಂಕರನಾರಾಯಣ ಹೇಳಿದರು.
ಶನಿವಾರ ಬೆಳಗ್ಗೆ 11.30ಕ್ಕೆ ನಗರದ ಶ್ರೀ ವೆಂಕಟೇಶ್ವರ ವೃತ್ತದಿಂದ ಹೊರಡುವ ಶೋಭಾಯಾತ್ರೆಯನ್ನು ವಿನೋಬನಗರ ಜಡೇಸಿದ್ದೇಶ್ವರ ಮಠದ ಶಿವಾನಂದ ಶ್ರೀಗಳು ಉದ್ಘಾಟಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮಾಳ, ನಂದಿಕೋಲು, ವೀರಗಾಸೆ, ಕೊಂಬು ಕಹಳೆ, ಡೊಳ್ಳು, ಕೋಲಾಟ ಮೊದಲಾದ ಕಲಾ ತಂಡಗಳು, ಸ್ತಬ್ಧಚಿತ್ರಗಳೊಂದಿಗೆ ದೇವಸ್ಥಾನಗಳ ಉತ್ಸವ ಮೂರ್ತಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿವೆ ಎಂದರು.
ಸಂಜೆ 6 ಗಂಟೆಗೆ ನಗರದ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನ ಆವರಣದಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರಿಂದ ಅಂಬುಛೇದನ ನಂತರ ಬನ್ನಿ ಮುಡಿಯುವ ಕಾರ್ಯಕ್ರಮ ಹಾಗೂ ಬಹಿರಂಗ ಸಭೆ ನಡೆಯಲಿದೆ. ಸಾರಿಕಾ ಮಂಜುನಾಥ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.
ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಎಸ್‌ಪಿ ಉಮಾ ಪ್ರಶಾಂತ್ ಇತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಮಿತಿಯ ಸದಸ್ಯರಾದ ಹರೀಶ್ ಪವಾರ್, ಆರ್.ಎಲ್. ಶಿವಪ್ರಕಾಶ್, ನವೀನ್‌ಕುಮಾರ್, ಚೇತನಾ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net