

ದಾವಣಗೆರೆ: ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ, ಅಂಗನವಾಡಿ ಕಾರ್ಯಕರ್ತೆ ಹಾಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೂ ಸಹಾಯಕಿಯರ ಗೌರವಧನ ಮೊತ್ತ ಏರಿಸಬೇಕೆಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಒಕ್ಕೂಟ ಒತ್ತಾಯಿಸಿದೆ.
ಕಾರ್ಯಕರ್ತೆಯರಿಗೆ 15 ಸಾವಿರ ರೂ., ಹಾಗೂ ಸಹಾಯಕಿಯರಿಗೆ 10 ಸಾವಿರ ರೂ. ಗೌರವಧನ ನೀಡಬೇಕು. 6ನೇ ಗ್ಯಾರಂಟಿಯಾಗಿ ಗೌರವಧನ ಹೆಚ್ಚಳ ಜಾರಿ ಮಾಡುವುದಾಗಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಭರವಸೆ ನೀಡಿತ್ತು. ನುಡಿದಂತೆ ಕ್ರಮ ವಹಿಸಬೇಕೆಂದು ಒತ್ತಾಯಿಸಿ ಡಿ.12ರಂದು ಬೆಳಗಾವಿಯ ಸುವರ್ಣಸೌಧದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಮಲ್ಲಮ್ಮ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಕ್ಕಳ ಪಾಲನೆ ಜತೆಗೆ ಅಂಗನವಾಡಿ ಸಿಬ್ಬಂದಿಯ ಕಾರ್ಯಭಾರ ಹೆಚ್ಚಾಗಿದೆ. ಸರ್ಕಾರ ಸೂಚಿಸುವ ಪ್ರತಿ ಕೆಲಸವನ್ನು ತಪ್ಪದೇ ಮಾಡುತ್ತಿದ್ದೇವೆ. ಆದರೆ, ಕನಿಷ್ಠ ಜೀವನ ನಡೆಸಲು ಸಾಧ್ಯವಾಗುವಂತಹ ಗೌರವಧನ ನೀಡುತ್ತಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗನವಾಡಿ ಸಿಬ್ಬಂದಿಯನ್ನು ನಿರ್ಲಕ್ಷ್ಯ ಮಾಡುತ್ತಿವೆ ಎಂದು ಆರೋಪಿಸಿದರು.
ಒಕ್ಕೂಟದ ಮುಖಂಡರಾದ ಎಂ.ಬಿ.ಶಾರದಮ್ಮ, ಕೆ.ಸಿ.ನಿರ್ಮಲಾ, ಎಚ್.ಜಿ.ಮಂಜುಳಾ, ಎಂ.ಆರ್.ಕುಸುಮಾ, ಎನ್.ಬಿ.ರೂಪಾ ಹಾಜರಿದ್ದರು.