ಹರಿಹರಕ್ಕೆ ಮಹಿಳಾ ಆಸ್ಪತ್ರೆ ಮಂಜೂರು

Davangere, District Hospital, Women and Children Hospital,
Published on

ದಾವಣಗೆರೆ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಹರಿಹರ ನಗರಕ್ಕೆ 50 ಹಾಸಿಗೆ ಸಾಮರ್ಥ್ಯದ, 20 ಕೋಟಿ ರೂ.ವೆಚ್ಚದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮಂಜೂರಾಗಿದೆ. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಮಂಜೂರಾತಿ ಆದೇಶ ಕಳುಹಿಸಿದೆ.

ದಾವಣಗೆರೆ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ 100 ಹಾಸಿಗೆ ಸಾಮರ್ಥ್ಯದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು 200 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಇದಕ್ಕಾಗಿ 13 ಕೋಟಿ ರೂ.ಅನುದಾನ ಬಿಡುಗಡೆಯಾಗಿದೆ.

ಈಗಾಗಲೆ 100 ಹಾಸಿಗೆ ಆಸ್ಪತ್ರೆ ನಿರ್ಮಾಣ ಕಾರ್ಯ ಮುಕ್ತಾಯ ಹಂತದಲ್ಲಿದ್ದು, ಇನ್ನೂ ಒಂದು ಹೆಚ್ಚುವರಿ ಅಂತಸ್ತು ನಿರ್ಮಾಣಕ್ಕಾಗಿ 13 ಕೋಟಿ ರೂ. ಒದಗಿಸಲಾಗಿದೆ ಎಂದು ಕಟ್ಟಡ ಕಾಮಗಾರಿ ವೀಕ್ಷಣೆ ಬಳಿಕ ಸಂಸದ ಜಿ.ಎಂ.ಸಿದ್ದೇಶ್ವರ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆ ಅಧೀಕ್ಷಕ ಡಾ.ಷಣ್ಮುಖಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗರಾಜ್, ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ ಹನಗವಾಡಿ, ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಆರೋಗ್ಯ ರಕ್ಷ್ಷಾ ಸಮಿತಿ ಸದಸ್ಯ ಟಿಂಕರ್ ಮಂಜಣ್ಣ, ಶಿವನಗೌಡ ಪಾಟೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net