ಸರ್ಕಾರದ ಸೌಲಭ್ಯ ಸದ್ಬಳಕೆಯಾಗಲಿ

1000544348.jpg
Published on

ದಾವಣಗೆರೆ: ಸರ್ಕಾರ ನೀಡಿದ ಸಲಕರಣೆಗಳನ್ನು ಫಲಾನುಭವಿಗಳು ಸದ್ಬಳಕೆ ಮಾಡಿಕೊಂಡಾಗ ಯೋಜನೆಗಳ ಜಾರಿ ಸಾರ್ಥಕವಾಗಲಿದೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.
ಹರಿಹರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ  ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿನ ಫಲಾನುಭವಿಗಳಿಗೆ ತ್ರಿಚಕ್ರವಾಹನ ವಿತರಣೆ ಮಾಡಿ ಮಾತನಾಡಿದರು.
ಅಂಗವಿಕಲರು ಸಮಾಜದಲ್ಲಿ ಗೌರವಯುತ ಜೀವನ ಸಾಗಿಸಲು ಹಾಗೂ ಎಲ್ಲ್ಲರಂತೆ ಬದುಕುವ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಇವು ಕಾರ್ಯಗತವಾಗಬೇಕು ಎಂದರು.
ಸರ್ಕಾರದ ಯೋಜನೆಗಳು ಆರ್ಹರಿಗೆ ಸಿಗಬೇಕು. ಅಧಿಕಾರಿಗಳು ಒತ್ತಡಕ್ಕೆ ಒಳಗಾಗದೆ ತಾಲೂಕಿನ ಅರ್ಹ 23 ಫಲಾನುಭವಿಗಳನ್ನು ಗುರುತಿಸಿದ್ದಾರೆ. ಸಲಕರಣೆ ಪಡೆದ ಫಲಾನುಭವಿಗಳು ಸರಿಯಾಗಿ ಬಳಸಿಕೊಂಡು ಉತ್ತಮ ಜೀವನ ಸಾಗಿಸಬೇಕು ಎಂದು ಹೇಳಿದರು.
21.90 ಲಕ್ಷ ರೂ. ಅನುದಾನದಡಿ ಈಗಾಗಲೇ ಅಂಗವಿಕಲರ ಕ್ಷೇಮಾಭಿವೃದ್ಧಿ ಭವನದ ಕಾಮಗಾರಿಗೆ ಚಾಲನೆ ನೀಡಲಾಗಿದೆ.   ಇದಕ್ಕೆ  ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದರು.
ಅಂಗವಿಕಲರ ಇಲಾಖೆ ಉಪ ನಿರ್ದೇಶಕ ಡಾ.ಕೆ.ಪ್ರಕಾಶ್, ತಾಲೂಕು ಕಲ್ಯಾಣಾಧಿಕಾರಿ ಶಶಿಕಲಾ, ತಾಲೂಕು ಪಂಚಾಯಿತಿ  ಇಒ ಎಸ್. ಪಿ.ಸುಮಲತಾ, ತಾಲೂಕು ಅಂಗವಿಕಲರ ಸಂಘದ ಅಧ್ಯಕ್ಷ ಕೆ.ಬಿ.ಪರಮೇಶ್ವರಪ್ಪ, ಕಾರ್ಯದರ್ಶಿ ಅನಿತಾ ಎಚ್.ಪಾಟೀಲ್, ಸಹಾಯಕ ಲೆಕ್ಕಾಧಿಕಾರಿ ಲಿಂಗರಾಜ್, ಇಲಾಖೆಯ ಅಧಿಕಾರಿಗಳು ಹಾಗೂ ಫಲಾನುಭವಿಗಳು ಇದ್ದರು.
----

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net