ಜಿಪಂ ಪ್ರಭಾರ ಅಧ್ಯಕ್ಷರಾಗಿ ಲೋಕೇಶ್ವರ ಅಧಿಕಾರ ಸ್ವೀಕಾರ

dvg zp june 1
ದಾವಣಗೆರೆ ಜಿಪಂ ಪ್ರಭಾರ ಅಧ್ಯಕ್ಷರಾಗಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್ವರ ಸೋಮವಾರ ಅಧಿಕಾರ ವಹಿಸಿಕೊಂಡರು. ಜಿ.ಪಂ. ಉಪ ಕಾರ್ಯದರ್ಶಿ ಆನಂದ್ ಇನ್ನಿತರ ಅಧಿಕಾರಿಗಳು ಇದ್ದರು.
Published on

ದಾವಣಗೆರೆ: ಜಿಪಂ ಅಧ್ಯಕ್ಷ ಸ್ಥಾನಕ್ಕೆ ಯಶೋದಮ್ಮ ಮರುಳಪ್ಪ ರಾಜೀನಾಮೆ ನೀಡಿದ್ದು, ನಲ್ಲೂರು ಕ್ಷೇತ್ರದ ಸದಸ್ಯ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರೂ ಆದ ಲೋಕೇಶ್ವರ ಪ್ರಭಾರ ಅಧ್ಯಕ್ಷರಾಗಿ ಸೋಮವಾರ ಅಧಿಕಾರ ವಹಿಸಿಕೊಂಡರು.

2019ರ ನ.11ರಂದು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದ ಯಶೋದಮ್ಮ, ಪಕ್ಷದ ಆಂತರಿಕ ಒಪ್ಪಂದದ ಪ್ರಕಾರ ಮೇ 16ರಂದು ರಾಜೀನಾಮೆ ನೀಡಿದ್ದರು ಎಂದು ತಿಳಿದು ಬಂದಿದೆ.

ಜಿಪಂ ಚುನಾಯಿತ ಸದಸ್ಯರ ಅವಧಿಯು 2021ರ ಮೇ 2 ರಂದು ಮುಗಿಯಲಿದೆ. ಬಾಕಿ ಇರುವ 11 ತಿಂಗಳಲ್ಲಿ ಬೇರೆಯವರಿಗೂ ಅವಕಾಶ ಮಾಡಿಕೊಡುವ ಉದ್ದೇಶದಿಂದ ಯಶೋದಮ್ಮ ಅವರ ರಾಜೀನಾಮೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಾಮಾನ್ಯ (ಮಹಿಳೆ) ವರ್ಗಕ್ಕೆ ಮೀಸಲಾಗಿರುವ ಅಧ್ಯಕ್ಷ ಸ್ಥಾನಕ್ಕೆ ಹೊನ್ನಾಳಿ ತಾಲೂಕು ಕುಂದೂರು ಕ್ಷೇತ್ರದ ಸದಸ್ಯೆ ದೀಪಾ ಜಗದೀಶ್ ಅವರ ಹೆಸರು ಕೇಳಿಬರುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net