ಜಿಎಂ ವಿವಿ ಹಾಸ್ಟೆಲ್ ಕಟ್ಟಡಕ್ಕೆ ಇಂದು ಶಿಲಾನ್ಯಾಸ

1000493747.jpg
Published on

ದಾವಣಗೆರೆ: ಶ್ರೀಶೈಲ ಎಜುಕೇಷನ್ ಟ್ರಸ್ಟ್‌ನ ಜಿಎಂ ವಿಶ್ವವಿದ್ಯಾಲಯದಲ್ಲಿ ನ. 12ರಂದು ಬೆಳಗ್ಗೆ 11 ಗಂಟೆಗೆ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ನಿರ್ಮಿತ ಹಾಸ್ಟೆಲ್‌ನ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
4 ಸಾವಿರ ವಿದ್ಯಾರ್ಥಿನಿಯರಿಗಾಗಿ ಯೋಜಿಸಿರುವ ನೂತನ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಕೇಂದ್ರದ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಸಚಿವ ಪ್ರಲ್ಹಾದ್ ಜೋಶಿ ಶಂಕುಸ್ಥಾಪನೆ ನೆರವೇರಿಸುವರು.
1200 ವಿದ್ಯಾರ್ಥಿನಿಯರಿಗಾಗಿ ಸಿ ಬ್ಲಾಕ್‌ನಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಹಾಸ್ಟೆಲ್ ಕಟ್ಟಡವನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಉದ್ಘಾಟಿಸುವರು ಎಂದು ಜಿಎಂ ಫಾರ್ಮಸಿ ಕಾಲೇಜಿನ ಪ್ರಾಚಾರ್ಯ ಡಾ. ಗಿರೀಶ್ ಬೋಳಕಟ್ಟಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಎಂ ಹಾಲಮ್ಮ ಸಭಾಂಗಣದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಮುರುಗೇಶ್ ಆರ್. ನಿರಾಣಿ, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಕೆ.ಎಸ್.ನವೀನ್, ಶಾಸಕ ಬಿ.ಪಿ.ಹರೀಶ್, ಲೋಕಸಭಾ ಚುನಾವಣಾ ಪರಾಜಿತ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪಾಲ್ಗೊಳ್ಳಲಿದ್ದು, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.
ಜಿಎಂ ವಿಶ್ವವಿದ್ಯಾಲಯದಲ್ಲಿ ಈ ವರ್ಷದಲ್ಲಿ 57 ಕೋರ್ಸ್ ಆರಂಭಿಸಲಾಗಿದೆ. 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪಿಜಿ ಕೋರ್ಸ್‌ಗಳಿಗೆ 1800 ವಿದ್ಯಾರ್ಥಿಗಳು ಬರುವ ನಿರೀಕ್ಷೆ ಇದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಡಾ. ಪ್ರವೀಣ್, ತೇಜಸ್ವಿ ಕಟ್ಟಿಮನಿ, ವಸಂತ್‌ಕುಮಾರ್ ಇದ್ದರು.
----

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net