

ದಾವಣಗೆರೆ: ಕಾರ್ಮಿಕರ ಕಲ್ಯಾಣಕ್ಕೆ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.
ನಗರದ ಗೃಹ ಕಚೇರಿ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಜಿಲ್ಲೆಯ ಕಟ್ಟಡ ಕಾರ್ಮಿಕರು ಹಾಗೂ ವೆಲ್ಡಿಂಗ್ ಕಾರ್ಮಿಕರಿಗೆ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು.
ಸರ್ಕಾರದಿಂದ ಕಾರ್ಮಿಕರ ಕಲ್ಯಾಣಕ್ಕೆ ಹಲವು ಯೋಜನೆ ರೂಪಿಸಲಾಗಿದೆ. ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ, ವಿವಾಹ ಸಹಾಯಧನ ಮತ್ತಿತರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಕಾರ್ಮಿಕರ ಅಭಿವೃದ್ಧಿಗೆ ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ. ಕಾರ್ಮಿಕರ ಯಾವುದೇ ಸಮಸ್ಯೆ, ಕುಂದುಕೊರತೆಗಳಿದ್ದರೂ ನಮ್ಮ ಕುಟುಂಬ ಸದಾ ಬೆನ್ನೆಲುಬಾಗಿ ಇರಲಿದೆ ಎಂದು ಭರವಸೆ ನೀಡಿದರು.
ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಇದ್ದರು.