ದಾವಣಗೆರೆಯಲ್ಲಿ 20 ಕ್ಕೆ ಸರಳ ಸಾಮೂಹಿಕ ವಿವಾಹ

news-10-18
Published on

ದಾವಣಗೆರೆ: ಬಹುಜನ ಸಮಾಜ ಸೇವಾ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಜಯಂತಿ ಪ್ರಯುಕ್ತ 4ನೇ ವರ್ಷದ ಸರ್ವಧರ್ಮೀಯರ ಸರಳ ಸಾಮೂಹಿಕ ವಿವಾಹ ಹಾಗೂ ಸಂಘದ 14ನೇ ವಾರ್ಷಿಕೋತ್ಸವವನ್ನು ಮೇ 20ರಂದು ನಗರದ ಶಿವಯೋಗಿ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ಹೆಗ್ಗೆರೆ ರಂಗಪ್ಪ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 11.30ರಿಂದ ಕಾರ್ಯಕ್ರಮ ನಡೆಯಲಿದೆ. ವಧು-ವರರು ಜಾತಿ ಮತ್ತು ಆದಾಯ ಪ್ರಮಾಣಪತ್ರ, ಶಾಲಾ ದಾಖಲಾತಿ, ವಾಸ ದೃಢೀಕರಣ, ಆಧಾರ್ ಕಾರ್ಡ್, ಪಡಿತರ ಚೀಟಿಗಳನ್ನು ಪ್ರತ್ಯೇಕವಾಗಿ ನೀಡಬೇಕು. ಮೇ 18ರ ಒಳಗಾಗಿ ಹೆಸರು ನೋಂದಾಯಿಸಬೇಕು ಎಂದು ಮನವಿ ಮಾಡಿದರು.

ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳುವ ವಧು-ವರರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಸಹಾಯಧನ ಕೊಡಿಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net