ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 10 ವರ್ಷ ಸಜೆ

1000220349_20240705004417520_20240726001514016.jpg
Published on

ದಾವಣಗೆರೆ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ನ್ಯಾಯಾಲಯವು ಗುರುವಾರ, 10 ವರ್ಷ ಕಾರಾಗೃಹ ಸಜೆ ಹಾಗೂ 50 ಸಾವಿರ ರೂ.ಗಳ ದಂಡ ವಿಧಿಸಿದೆ.
ಚನ್ನಗಿರಿ ತಾಲೂಕಿನ ಅಣ್ಣಾಪುರದ ಆಟೊ ಚಾಲಕ ಸಚಿನ್ ಶಿಕ್ಷೆಗೆ ಗುರಿಯಾದ ಅಪರಾಧಿ.  ಎಸ್ಸೆಸ್ಸೆಲ್ಸಿ ಓದುತ್ತಿದ್ದ 16 ವರ್ಷದ ಸಂತ್ರಸ್ತ ಬಾಲಕಿಯು ಅಪರಾಧಿಯ ಆಟೋದಲ್ಲಿ ಶಾಲೆಗೆ ತೆರಳುತ್ತಿದ್ದಳು. ನಿನ್ನನ್ನು ಪ್ರೀತಿಸುತ್ತೇನೆ ಮತ್ತು ಮದುವೆಯಾಗುತ್ತೇನೆ ಎಂದು ಪುಸಲಾಯಿಸಿದ್ದ ಸಚಿನ್, 2021ರ ಸೆ. 9ರಂದು ಬಾಲಕಿಯನ್ನು ಅಪಹರಿಸಿ, ಚಿಕ್ಕಮಗಳೂರು ಜಿಲ್ಲೆಯ ಕಲ್ಲತ್ತಗಿರಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಅಪರಾಧಿ ಮತ್ತು ಕೃತ್ಯಕ್ಕೆ ಸಹಕರಿಸಿದ್ದ ಆರೋಪದಡಿ ಆತನ ತಾಯಿ ವಿರುದ್ಧ ಚನ್ನಗಿರಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ತನಿಖಾಧಿಕಾರಿಯಾಗಿದ್ದ ಚನ್ನಗಿರಿ ಪೊಲೀಸ್ ಇನ್ಸ್‌ಪೆಕ್ಟರ್ ಪಿ.ಬಿ.ಮಧು ನ್ಯಾಯಾಲಯಕ್ಕೆ  ದೋಷರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶ ಶ್ರೀರಾಮ್ ನಾರಾಯಣ ಹೆಗ್ಡೆ ಅವರು ಅಪರಾಧಿಗೆ ಶಿಕ್ಷೆ ಪ್ರಕಟಿಸಿದರು. ಸರ್ಕಾರದ ಪರ ಸರ್ಕಾರಿ ಅಭಿಯೋಜಕಿ ಸುನಂದಾ ಮಡಿವಾಳರ್ ವಕಾಲತ್ತು ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net