

ದಾವಣಗೆರೆ: ಬಾಳೆಹೊನ್ನೂರಿನ ರಂಭಾಪುರಿ ಜಗದ್ಗುರುಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ, ಜನಜಾಗೃತಿ ಧರ್ಮ ಸಮಾವೇಶ ಕಾರ್ಯಕ್ರಮ ನಗರದ ಅಭಿನವ ರೇಣುಕ ಮಂದಿರದಲ್ಲಿ ಜು. 30ರಿಂದ ಆ.3ರ ವರೆಗೆ ನಡೆಯಲಿದೆ.
ಮದ್ವೀರಶೈವ ಸದ್ಬೋಧನಾ ಸಂಸ್ಥೆ ಬಾಳೆಹೊನ್ನೂರು ಮತ್ತು ದಾವಣಗೆರೆ ಜಿಲ್ಲಾ ಘಟಕದ ಸಹಯೋಗದಲ್ಲಿ ನಿತ್ಯ ಸಂಜೆ 6-30ಕ್ಕೆ ನಡೆಯಲಿರುವ ಕಾರ್ಯಕ್ರಮಗಳ ದಿವ್ಯ ಸಾನಿಧ್ಯವನ್ನು ಶ್ರೀ ರಂಭಾಪುರಿ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ವಹಿಸುವರು.
ಜು.30 ರ ಕಾರ್ಯಕ್ರಮವನ್ನು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ, ಲೆಕ್ಕ ಪರಿಶೋಧಕ ಅಥಣಿ ವೀರಣ್ಣ, ಉದ್ಯಮಿಗಳಾದ ಅಣಬೇರು ರಾಜಣ್ಣ, ಎಸ್.ಎಸ್. ಗಣೇಶ್ ಮತ್ತಿತರರು ಪಾಲ್ಗೊಳ್ಳುವರು. ಪ್ಲಾಸ್ಟಿಕ್ ಸರ್ಜನ್ ಡಾ. ಕೆ.ಸಿ. ಶಿವಮೂರ್ತಿ ಅವರಿಗೆ ‘ವೈದ್ಯ ಚಿಂತಾಮಣಿ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಜು.31 ರಂದು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ವಿಪ ಮಾಜಿ ಸದಸ್ಯ ಡಾ. ಎ.ಎಚ್.ಶಿವಯೋಗಿಸ್ವಾಮಿ ಪಾಲ್ಗೊಳ್ಳುವರು. ಉದ್ಯಮಿ ಬಿ. ಚಿದಾನಂದಪ್ಪ ಅವರಿಗೆ ‘ಧರ್ಮ ರತ್ನಾಕರ‘ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು.
ಆ.1 ರಂದು ಮುಕ್ತಿಮಂದಿರ ಕ್ಷೇತ್ರದ ಅಧ್ಯಕ್ಷ ಶ್ರೀ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯರ ನೇತೃತ್ವದ ಕಾರ್ಯಕ್ರಮದಲ್ಲಿ ಲೋಕಸಭೆ ಪರಾಜಿತ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಎಸ್ಪಿ ಉಮಾ ಪ್ರಶಾಂತ್, ಉಪ ಮೇಯರ್ ಯಶೋದಾ ಯಗ್ಗಪ್ಪ, ಬಿಜೆಪಿ ರಾಜ್ಯ ಮಹಿಳಾ ಘಟಕ ಉಪಾಧ್ಯಕ್ಷೆ ಎಚ್.ಸಿ. ಜಯಮ್ಮ, ಪಾಲಿಕೆ ಆಯುಕ್ತೆ ರೇಣುಕಾ ಪಾಲ್ಗೊಳ್ಳುವರು. ಯುಪಿಎಸ್‌ಸಿ ಸಾಧಕಿ ಸೌಭಾಗ್ಯಾ ಬೀಳಗಿಮಠ ಅವರಿಗೆ ‘ಸಾಧನೆಯ ಶಿಖರ’ ಪ್ರಶಸ್ತಿ ನೀಡಲಾಗುವುದು.
ಆ.2 ರ ಸಮಾವೇಶದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಶಾಸಕ ಶಿವಗಂಗಾ ಬಸವರಾಜ್, ಮೇಯರ್ ವಿನಾಯಕ ಪೈಲ್ವಾನ್, ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ ಬಡದಾಳ್ ಭಾಗವಹಿಸುವರು. ಮುಖಂಡ ಶಿವಗಂಗಾ ಶ್ರೀನಿವಾಸ ಅವರಿಗೆ ‘ಶ್ರಮ ಸೇವಾ ಸಂಜೀವಿನಿ’ ಪ್ರಶಸ್ತಿ ನೀಡಿ ಗೌರವಿಸಲಾವುದು.
ಆ.3 ರ ಸಮಾರೋಪದ ನೇತೃತ್ವವನ್ನು ಶ್ರೀ ರಾಚೋಟೇಶ್ವರ ಸ್ವಾಮೀಜಿ ವಹಿಸಲಿದ್ದು, ಕೇದಾರ ಶ್ರೀಗಳು ಉಪದೇಶಾಮೃತ ನೀಡುವರು. ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವ ನಾಯ್ಕ್, ಮಾಜಿ ಮೇಯರ್ ಬಿ.ಜಿ. ಅಜಯಕುಮಾರ್, ಎಸ್.ಟಿ. ವೀರೇಶ್ ಪಾಲ್ಗೊಳ್ಳಲಿದ್ದು, ಬಿಜೆಪಿಯ ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ‘ಸಮಾಜ ಸೇವಾ ವಿಭೂಷಣ’ ಪ್ರಶಸ್ತಿ ಪ್ರದಾನ ಮಾಡಲಾಗುವುದು.