

ದಾವಣಗೆರೆ: ತಾಲೂಕಿನ ಹೊನ್ನೂರು ಗೊಲ್ಲರಹಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ, ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ವೈದ್ಯರೊಬ್ಬರು ಮೃತಪಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲೆ ಸಿರಿಗೆರೆಯ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಜಿ.ಆರ್.ತಿಮ್ಮೇಗೌಡ (34) ಮೃತರು.
ದಾವಣಗೆರೆಯಲ್ಲಿ ಆಯೋಜಿಸಿದ್ದ ಮಕ್ಕಳ ಶ್ವಾಸಕೋಶ ತಜ್ಞರ ವಾರ್ಷಿಕ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದ ಅವರು ರಾತ್ರಿ ಖುದ್ದು ಕಾರು ಚಾಲನೆ ಮಾಡಿಕೊಂಡು ಚಿತ್ರದುರ್ಗಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಾಗಿದೆ.
---