ದಾವಣಗೆರೆಯ ಎಸ್ಸೆಸ್ ಆಸ್ಪತ್ರೇಲಿ ಕೋವಿಡ್ ಲ್ಯಾಬ್ ಶುರು

Davanagere Medical College, Kovid, Lab, Establishment,
Published on

ದಾವಣಗೆರೆ: ಎಸ್‌ಎಸ್ ಆಸ್ಪತ್ರೆಯ ಪಿಸಿಆರ್ ಲ್ಯಾಬ್‌ನಲ್ಲಿ ತೆರೆಯಲಾದ ನೂತನ ಕೋವಿಡ್- 19 ಪರೀಕ್ಷಾ ಲ್ಯಾಬ್‌ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಶನಿವಾರ ಚಾಲನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ಲ್ಯಾಬ್‌ಗೆ ಚುನಾಯಿತ ಪ್ರತಿನಿಧಿಗಳಿಂದ ಬೇಡಿಕೆ ಬಂದಿತ್ತು. ಏಪ್ರಿಲ್‌ನಲ್ಲಿ ಸಭೆ ನಡೆಸಿ, ಎಲ್ಲ ವೈದ್ಯಕೀಯ ಕಾಲೇಜುಗಳಲ್ಲಿ ಕೋವಿಡ್ ಲ್ಯಾಬ್ ಅಳವಡಿಸಿಕೊಳ್ಳಲು ಸೂಚಿಸಿದ್ದೆ. ಹಿರಿಯರಾದ ಶಾಮನೂರು ಶಿವಶಂಕರಪ್ಪ ತಮ್ಮ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ಸಜ್ಜುಗೊಳಿಸಿದ್ದು ಸಂತಸದ ವಿಚಾರ ಎಂದರು.

ಜಿಲ್ಲಾ ಆಸ್ಪತ್ರೆಯಲ್ಲಿ ಆರ್‌ಎನ್‌ಟಿಸಿಪಿ ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಈ ವಾರದಲ್ಲಿಯೇ ಉದ್ಘಾಟನೆ ಆಗಲಿದೆ. ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿಯೂ ಇನ್ನೊಂದು ಲ್ಯಾಬ್ ತೆರೆಯಲಾಗುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಮಾಡಾಳ್ ವಿರೂಪಾಕ್ಷಪ್ಪ, ಮೇಯರ್ ಬಿ.ಜಿ.ಅಜಯಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್‌ಪಿ ಹನುಮಂತರಾಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net