

ದಾವಣಗೆರೆ : ಹೈಕಮಾಂಡ್ ಜತೆಗೆ ರಾಜ್ಯ ಕಾಂಗ್ರೆಸ್‌ನ 136 ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದೇವೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಸರ್ಕಾರ ಬೀಳಿಸುವ ಹಗಲುಗನಸು ಕಾಣುವುದು ಬೇಡ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಶೋಷಿತ ಸಮುದಾಯಗಳ ಒಕ್ಕೂಟ ಹಮ್ಮಿಕೊಂಡಿದ್ದ ಪ್ರತಿಭಟನೆ ನಂತರ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದರು.
ದೇಶದಲ್ಲಿಯೇ ಉತ್ತಮ ಆಡಳಿತ ನೀಡುತ್ತಿರುವ ಸಿದ್ದರಾಮಯ್ಯ ಅವರ ಏಳಿಗೆ ಸಹಿಸದೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸರ್ಕಾರ ಉರುಳಿಸುವ ಕುತಂತ್ರ ನಡೆಸಿವೆ. ಕೇಂದ್ರ ಬಿಜೆಪಿ ಸರ್ಕಾರ ರಾಜಭವನವನ್ನು ಬಿಜೆಪಿ ಕಚೇರಿ ಮಾಡಲು ಹೊರಟಿದೆ ಎಂದು ಟೀಕಿಸಿದರು.
ಸಿದ್ದರಾಮಯ್ಯನವರು ಈಗಾಗಲೇ ಮುಡಾಗೆ ಸಂಬಂಧಿಸಿದಂತೆ ಯಾರ ಕಾಲದಲ್ಲಿ ಏನೇನು ನಡೆದಿದೆ ಎಂಬ ಬಗ್ಗೆ ವಾಸ್ತವಾಂಶ ಮನವರಿಕೆ ಮಾಡಿಕೊಟ್ಟಿದ್ದಾರೆ. ೀತಿಕ ಪ್ರತಿಭಟನೆ. ಶೋಷಿತ ಸಮುದಾಯ ಎದ್ದರೆ ಕೇಂದ್ರ ಸರ್ಕಾರ ನಡುಗಲಿದೆ ಎಂದು ಎಚ್ಚರಿಸಿದರು.
ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ವಿರುದ್ಧ ಷಡ್ಯಂತ್ರ ನಡೆಸಲಾಗಿದ್ದು, ರಾಜ್ಯಪಾಲರು ತಕ್ಷಣ ಶೋಕಾಸ್ ನೋಟಿಸ್ ವಾಪಾಸ್ ಪಡೆಯಬೇಕು ಎಂದು ಒತ್ತಾಯಿಸಿದರಲ್ಲದೆ, ಅಹಿಂದ ವರ್ಗದವರು ಬುದ್ಧಿವಂತರಾಗಬೇಕು ಎಂದರು.
ಮುಖಂಡ ಹೊದಿಗೆರೆ ರಮೇಶ್ ಮಾತನಾಡಿ, ರಾಜ್ಯಪಾಲರು ಅಧಿಕಾರ ದುರುಪಯೋಗ ಪಡಿಸಿಕೊಂಡರೆ ರಾಜ್ಯ ಬಂದ್ ಮಾಡುವ ಮೂಲಕ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ ಜಯದೇವನಾಯ್ಕ, ಎಚ್.ಬಿ. ಮಂಜಪ್ಪ, ಮೇಯರ್ ವಿನಾಯಕ ಪೈಲ್ವಾನ್, ಮುಖಂಡರಾದ ಅಸಗೋಡು ಜಯಸಿಂಹ, ಬಿ. ವೀರಣ್ಣ, ಲೋಕಿಕೆರೆ ಸಿದ್ದಪ್ಪ ಇತರರು ಇದ್ದರು.