

ಮಂಡ್ಯ: ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಗುರುವಾರದಿಂದ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಜಿಲ್ಲಾದ್ಯಂತ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾಗಮಂಗಲ ಪುರಸಭಾ ವಾಣಿಜ್ಯ ಸಂಕೀರ್ಣದ ನೂತನ ಕಟ್ಟಡದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಬಳಿಕ ಪುರಸಭೆಗೆ ಭೇಟಿ ನೀಡಿ ಕುಡಿಯುವ ನೀರು, ಸ್ವಚ್ಛತೆ, ಕಸ ವಿಲೇವಾರಿ ಇತ್ಯಾದಿಗಳ ಬಗ್ಗೆ ಮುಖ್ಯಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ 2024 ಸಂಬಂಧಪಟ್ಟ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.