

ಚಿಕ್ಕಮಗಳೂರು: ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡಿಸಿ ಮೀನಾ ನಾಗರಾಜ್ ಹಾಗೂ ಜಿಪಂ ಸಿಇಒ ಡಾ.ಬಿ.ಗೋಪಾಲಕೃಷ್ಣ ಅವರು ನಗರದ ಎಐಟಿ ಬಳಿ ಇರುವ ಇಂಜಿನಿಯರಿAಗ್ ಕಾಲೇಜು ಹಾಸ್ಟೆಲ್ ಹಾಗೂ ಬೇಲೂರು ರಸ್ತೆಯಲ್ಲಿರುವ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಹಾಗೂ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಡಿಸಿ ಮೀನಾ ನಾಗರಾಜ್ ಅವರು, ಡೆಂಘೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೊದಲಿಗೆ ಸ್ಚಚ್ಛತೆಗೆ ಆಧ್ಯತೆ ನೀಡಬೇಕು. ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಆರೋಗ್ಯದ ಸಮಸ್ಯೆ ಎದುರಾಗಂತೆ ಮುಂಜಾಗ್ರತೆ ವಹಿಸಬೇಕು. ಊಟದ ವ್ಯವಸ್ಥೆ ಶುಚಿತ್ವದಿಂದ ಕೂಡಿರಬೇಕು ಎಂದು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು.
ಫಿಜಿಕ್ಸ್, ಕೆಮಿಸ್ಟಿç, ಜಾವ, ಫೈಥನಾ ವಿಷಯಗಳು ಇನ್ನಷ್ಟು ಅವಶ್ಯವಿದೆ ಎಂದು ಇಂಜಿನಿಯರಿAಗ್ ಕಾಲೇಜು ವಿದ್ಯಾರ್ಥಿನಿಯರು ಡಿಸಿ ಮೀನಾ ನಾಗರಾಜ್ ಅವರ ಗಮಕ್ಕೆ ತಂದಾಗ ಸದ್ಯದಲ್ಲೇ ಆನ್‌ಲೈನ್ ತರಗತಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ ಡಿಸಿ ಹಾಸ್ಟೆಲ್‌ನ ಗ್ರಂಥಾಲಯಗಳಲ್ಲಿ ಪ್ರತಿನಿತ್ಯ ಪತ್ರಿಕೆಗಳನ್ನು ಬಿಡುವಿನ ಸಮಯದಲ್ಲಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇತ್ತೀಚೆಗೆ ಡೆಂಘೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಜಾಗೃತರಾಗಿರಬೇಕು. ನೀರು ನಿಲ್ಲುವಂತಹ ಜಾಗಗಳಲ್ಲಿ ಹೆಚ್ಚು ಸಮಯವ್ಯರ್ಥ ಮಾಡಬಾರದು. ಶೌಚಗೃಹ ಹಾಗೂ ಹಾಸ್ಟೆಲ್ ಆವರಣದಲ್ಲಿ ಶುಚಿತ್ವ ಕಾಪಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಿದರು.
ಬಳಿಕ ವಿದ್ಯಾರ್ಥಿಗಳ ಕೊಠಡಿಗಳಿಗೆ ಭೇಟಿ ನೀಡಿದ ಡಿಸಿ ವಿದ್ಯುತ್ ದೀಪಗಳನ್ನು ಬದಲಿಸಿ ಹೊಸದಾಗಿ ಅಳವಡಿಸಬೇಕು ಎಂದು ವಾರ್ಡನ್‌ಗೆ ಸೂಚನೆ ನೀಡಿದರು. ಜೊತೆಗೆ ಕೊಠಡಿಗಳಲ್ಲಿ ಹಾಸಿಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸಮಪರ್ಕವಾಗಿದೆಯೇಬ ಎಂಬುದರ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಹಾಸಿಗೆ ವ್ಯವಸ್ಥೆ, ಔಷಧಗಳ ಲಭ್ಯತೆ ಹಾಗೂ ಸ್ವಚ್ಚತೆಯ ಬಗ್ಗೆ ಪರಿಶೀಲಿಸಿದರು. ಜೊತೆಗೆ ಆಸ್ಪತ್ರೆಯಲ್ಲಿದ್ದ ರೋಗಿಗಳೊಂದಿಗೆ ಚರ್ಚಿಸಿ, ಅವರಿಗೆ ಅಗತ್ಯವಾದ ಚಿಕಿತ್ಸೆ ಲಭಿಸುತ್ತಿದೆಯೇ ಎಂಬ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೀಶ್, ಡಿಎಚ್‌ಒ ಅಶ್ವಥ್ ಬಾಬು ಮತ್ತಿತರರಿದ್ದರು.