ವಿದ್ಯಾರ್ಥಿನಿಲಯದಲ್ಲಿ ಆಹಾರ ಗುಣಮಟ್ಟ ಪರಿಶೀಲಿಸಿದ ಡಿಸಿ

IMG-20240103-WA0088
ಪಾಂಡವಪುರ ಪಟ್ಟಣದ ಡಿ.ದೇವರಾಜ ಅರಸು ಬಾಲಕಿಯರ ವಸತಿ ನಿಲಯಕ್ಕೆ ಬುಧವಾರ ಭೇಟಿ ನೀಡಿದ ಜಿಲ್ಲಾಕಾರಿ ಡಾ.ಕುಮಾರ್ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆ ನಡೆಸಿದರು.
Published on

ಪಾಂಡವಪುರ: ಪಟ್ಟಣದ ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಜಿಲ್ಲಾಕಾರಿ ಡಾ.ಕುಮಾರ್ ಭೇಟಿ ನೀಡಿ ಹಾಸ್ಟೆಲ್‌ನ ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳಿಗೆ ನೀಡುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಬುಧವಾರ ಪರಿಶೀಲಿಸಿದರು.

ತಾಲೂಕು ಮಟ್ಟದ ಅಕಾರಿಗಳೊಂದಿಗೆ ಹಾಸ್ಟೆಲ್‌ಗೆ ಭೇಟಿ ನೀಡಿದ ಜಿಲ್ಲಾಕಾರಿ, ಹಾಸ್ಟೆಲ್‌ನಲ್ಲಿ ದೊರಕುತ್ತಿರುವ ಸೌಲಭ್ಯಗಳ ಜತೆಗೆ ಊಟ, ವಸತಿ ಹಾಗೂ ಆಹಾರದ ಗುಣಮಟ್ಟದ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡರು.

ಈ ವೇಳೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿ ಮಾತನಾಡಿದ ಅವರು, ಸರ್ಕಾರ ನೀಡುತ್ತಿರುವ ಸೌಲಭ್ಯ ಬಳಸಿಕೊಂಡು ಉತ್ತಮ ಪ್ರಜೆಗಳಾಗಿ ಉನ್ನತ ಹುದ್ದೆ ಪಡೆಯುವುದರೊಂದಿಗೆ ಸತ್ಪ್ರಜೆಗಳಾಗಬೇಕು. ಉತ್ತಮ ವಿದ್ಯಾಭ್ಯಾಸ ಪಡೆಯುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಬಳಿಕ ತಾಲೂಕಿನ ಕಟ್ಟೇರಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಮಕ್ಕಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳು ಗುಣಮಟ್ಟದಿಂದಿರಬೇಕು. ಮಕ್ಕಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಅಪರ ಜಿಲ್ಲಾಕಾರಿ ಡಾ. ಎಚ್.ಎಲ್.ನಾಗರಾಜು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net